ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ದೆಹಲಿ ಲೆ.ಗವರ್ನರ್ ಕಚೇರಿಯ 13 ಸಿಬ್ಬಂದಿಗೆ ಕೊರೋನಾ: ಆಸ್ಪತ್ರೆಗಳಲ್ಲಿ ಬೆಡ್ ಸೌಲಭ್ಯದ ಮಾಹಿತಿ ನೀಡುವ ಆಪ್ ಬಿಡುಗಡೆ

ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಿಸುತ್ತಿದೆ. ಅದು ಅಧಿಕಾರ ಶಕ್ತಿ ಕೇಂದ್ರವನ್ನೂ ಬಿಟ್ಟಿಲ್ಲ. ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ಕಚೇರಿಯ 13 ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಿಸುತ್ತಿದೆ. ಅದು ಅಧಿಕಾರ ಶಕ್ತಿ ಕೇಂದ್ರವನ್ನೂ ಬಿಟ್ಟಿಲ್ಲ. ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ಕಚೇರಿಯ 13 ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಕೆಲ ದಿನಗಳ ಹಿಂದೆ ಲೆಫ್ಟಿನೆಂಟ್ ಕಚೇರಿಯ ಓರ್ವ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಅದೀಗ 13 ಮಂದಿಗೆ ಹರಡಿದೆ.
ಇದೇ ಸಂದರ್ಭದಲ್ಲಿ ಇಂದು ಮತ್ತೆ ಸಭೆ ನಡೆಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಕೊರೋನಾ ಕೇಸುಗಳ ಸಂಖ್ಯೆ ಹೆಚ್ಚಾಗುತ್ತಿದ್ದು ರೋಗಿಗಳಿಗೆ ಸಿಗುವ ಚಿಕಿತ್ಸೆ ಬಗ್ಗೆ ಆತಂಕಪಡುವ ಅವಶ್ಯಕತೆಯಿಲ್ಲ. ಸರ್ಕಾರ ಆಸ್ಪತ್ರೆಗಳಲ್ಲಿ ಹಾಸಿಗೆ, ಐಸಿಯು ಮತ್ತು ವೆಂಟಿಲೇಟರ್ ಗಳ ಸಾಕಷ್ಟು ವ್ಯವಸ್ಥೆ ಮಾಡಿದೆ. ಯಾರಿಗೇ ಆಗಲಿ ಸೋಂಕು ಕಾಣಿಸಿಕೊಂಡರೆ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರಕಲಿದೆ ಎಂದರು.

ಆಸ್ಪತ್ರೆಗಳಲ್ಲಿ ಬೆಡ್ ಮತ್ತು ವೈದ್ಯಕೀಯ ಸೌಲಭ್ಯಗಳ ಕೊರತೆಯಿದೆ ಎಂದು ಸಾಕಷ್ಟು ಮಂದಿ ದೂರು ನೀಡಿದ್ದಾರೆ. ಆದರೆ ಜನರಿಗೆ ಮಾಹಿತಿಯ ಕೊರತೆಯಿದೆ ಎಂದು ಹೇಳಲು ಬಯಸುತ್ತೇನೆ. ಇಂದಿಗೂ ಸಹ ದೆಹಲಿಯ ವಿವಿಧ ಆಸ್ಪತ್ರೆಗಳಲ್ಲಿ 4,100 ಬೆಡ್ ಗಳು ಖಾಲಿಯಿವೆ ಎಂದು ಸ್ಪಷ್ಟಪಡಿಸಿದರು.

ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸಮಸ್ಯೆ ತಲೆದೋರದಂತೆ ಆಪ್ ನ್ನು ಆರಂಭಿಸುತ್ತಿದ್ದೇವೆ. ಅದರಲ್ಲಿ ದೆಹಲಿಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿರುವ ಬೆಡ್ ಗಳ ಸೌಲಭ್ಯದ ಬಗ್ಗೆ ಮಾಹಿತಿ ನೀಡಲಿದೆ. ದೆಹಲಿಯಲ್ಲಿ ಪ್ರಸ್ತುತ ಒಟ್ಟು 302 ವೆಂಟಿಲೇಟರ್ ಗಳು ಇದ್ದು ಅವುಗಳಲ್ಲಿ 210 ಖಾಲಿಯಿವೆ. ಇವೆಲ್ಲಾ ಮಾಹಿತಿಗಳನ್ನು ದಿನಕ್ಕೆ ಎರಡು ಬಾರಿ ಅಪ್ ಡೇಟ್ ಮಾಡಲಾಗುತ್ತದೆ. ಅದರಲ್ಲಿ ಇತ್ತೀಚಿನ ಮಾಹಿತಿ ಸಿಗುತ್ತದೆ ಎಂದರು.

Related Stories

No stories found.

Advertisement

X
Kannada Prabha
www.kannadaprabha.com