ದಿಢೀರ್ ಅಂತಾ ಪ್ರಧಾನಿ ಮೋದಿಗೆ ಕರೆ ಮಾಡಿದ ಅಮೆರಿಕಾ ಅಧ್ಯಕ್ಷ!

ಮಿತ್ರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಆತ್ಮೀಯ ಮತ್ತು ಫಲಪ್ರದ ಮಾತುಕತೆ ನಡೆಯಿತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. 
ಮೋದಿ-ಟ್ರಂಪ್
ಮೋದಿ-ಟ್ರಂಪ್

ನವದೆಹಲಿ: ಮಿತ್ರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಆತ್ಮೀಯ ಮತ್ತು ಫಲಪ್ರದ ಮಾತುಕತೆ ನಡೆಯಿತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. 

ಅಮೆರಿಕದಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಭಾಗಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡೊನಾಲ್ಡ್ ಟ್ರಂಪ್ ಆಹ್ವಾನ ನೀಡಿದ್ದಾರೆ. ಇದೇ ವೇಳೆ ಕೊರೊನಾ ಸಾಂಕ್ರಾಮಿಕ ಬಿಕ್ಕಟ್ಟು, ಭಾರತ-ಚೀನಾ ಗಡಿ ವಿವಾದ, ಅಮೆರಿಕಾದಲ್ಲಿ ನಡೆಯುತ್ತಿರುವ ಕಪ್ಪುವರ್ಣಿಯರ ದಂಗೆ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಯಿತು ಎಂದು ಅವರು ಹೇಳಿದ್ದಾರೆ. 

ಕೋವಿಡ್ - 19 ನಂತರ ಜಾಗತಿಕ ವ್ಯವಸ್ಥೆಯಲ್ಲಿ ಭಾರತ-ಅಮೆರಿಕ ಸಮಾಲೋಚನೆಗಳ ವಿಸ್ತಾರ ಪ್ರಮುಖ ಆಧಾರ ಸ್ತಂಭವಾಗಿರಲಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com