ದೆಹಲಿ: ರೈಲ್ವೇ ಅಧಿಕಾರಿ, ಕುಟುಂಬ ಸದಸ್ಯರಲ್ಲಿ ಕೊರೋನಾ ವೈರಸ್ ಪತ್ತೆ!

ರಾಷ್ಟ್ರ ರಾಜಧಾನಿ ದೆಹಲಿ ರೈಲ್ವೇ ಅಧಿಕಾರಿ ಹಾಗೂ ಅವರ ಕುಟುಂಬ ಸದಸ್ಯರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ಗುರುವಾರ ಮೂಲಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ರೈಲ್ವೇ ಅಧಿಕಾರಿ ಹಾಗೂ ಅವರ ಕುಟುಂಬ ಸದಸ್ಯರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ಗುರುವಾರ ಮೂಲಗಳಿಂದ ತಿಳಿದುಬಂದಿದೆ. 

ಜೂನ್ 1 ರಂದು ಕಚೇರಿಗೆ ಆಗಮಿಸಿದ್ದ ಅಧಿಕಾರಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದೀಗ ದೆಹಲಿಯಲ್ಲಿ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. 

ಅಧಿಕಾರಿಯ ಪತ್ನಿ ಹಾಗೂ ಪುತ್ರಿಯಲ್ಲೂ ವೈರಸ್ ಪತ್ತೆಯಾಗಿದ್ದು, ಕೋವಿಡ್ ಚಿಕಿತ್ಸೆಗೆಂದೇ ನಿಯೋಜಿಸಲಾಗಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಇದೀಗ ಆನ್'ಲೈನ್ ಮೂಲಕವೇ ಸಭೆ ನಡೆಸಲು ನಿರ್ಧಾರ ಕೈಗೊಂಡಿದ್ದಾರೆನ್ನಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com