ಮಾಜಿ ಕೇಂದ್ರ ಸಚಿವ ಚಿದಂಬರಂ ಜಾಮೀನು ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ 'ಸುಪ್ರೀಂ'

ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂಗೆ ನೀಡಿದ್ದ ಜಾಮೀನು ವಿರುದ್ಧ ಕೇಂದ್ರ ತನಿಖಾ ದಳ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್  ವಜಾಗೊಳಿಸಿದೆ.
ಪಿ ಚಿದಂಬರಂ
ಪಿ ಚಿದಂಬರಂ

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂಗೆ ನೀಡಿದ್ದ ಜಾಮೀನು ವಿರುದ್ಧ ಕೇಂದ್ರ ತನಿಖಾ ದಳ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್  ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಆರ್ ಭಾನುಮತಿ, ಎ ಎಸ್ ಬೋಪಣ್ಣ ಮತ್ತು ಹೃಷಿಕೇಶ ರಾಯ್ ಅವರ ನ್ಯಾಯಪೀಠ ಅವರು 'ಪರಿಶೀಲನಾ ಅರ್ಜಿ ಮತ್ತು ಸಂಪರ್ಕಿತ ಪತ್ರಿಕೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ್ದೇವೆ. ಮರುಪರಿಶೀಲನೆಗೆ ಅಗತ್ಯವಾದ ಯಾವುದೇ ದೋಷ ಕಂಡು ಬಂದಿಲ್ಲ ಎಂದು ಮನವರಿಕೆಯಾಗಿದೆ. ಆ ಪ್ರಕಾರ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಹೇಳಿದರು. 

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿ ಚಿದಂಬರಂ ಮತ್ತು ಪುತ್ರ ಕಾರ್ತಿ ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ. 

ಚಿದಂಬರಂ ಅವರು 2007ರಲ್ಲಿ ಹಣಕಾಸು ಸಚಿವರಾಗಿದ್ದಾಗ ಐಎನ್ ಎಕ್ಸ್ ಮೀಡಿಯಾ ಗ್ರೂಪ್ ಗೆ ವಿದೇಶಿ ಹೂಡಿಕೆ ಪ್ರವರ್ಧನೆ ಮಂಡಳಿ(ಎಫ್ಐಪಿಬಿ)ಯ ಅನುಮತಿ ನೀಡುವಲ್ಲಿ ಅಕ್ರಮವೆಸಗಿ 305 ಕೋಟಿ ರೂಪಾಯಿ ಲಂಚ ಪಡೆದಿದ್ದರು ಎಂಬ ಆರೋಪದ ಮೇಲೆ 2017ರಲ್ಲಿ ಸಿಬಿಐ ಕೇಸು ದಾಖಲಿಸಿತ್ತು. ನಂತರ ಜಾರಿ ನಿರ್ದೇಶನಾಲಯ ಕೂಡ ಅಕ್ರಮ ಹಣ ವರ್ಗಾವಣೆ ಕೇಸಿಗೆ ಸಂಬಂಧಪಟ್ಟಂತೆ ಕೇಸು ಹಾಕಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com