ಸರ್ಕಾರಿ ಆಸ್ಪತ್ರೆಗಳಲ್ಲಿರುವ ಅಲ್ಪ ಪ್ರಮಾಣದ ಸೋಂಕು, ರೋಗ ಲಕ್ಷಣಗಳೇ ಇಲ್ಲದ ಸೋಂಕಿತರ ಬಿಡುಗಡೆ: ಸಿಎಂ ಕೇಜ್ರಿವಾಲ್

ಕೊರೋನಾ ವೈರಸ್ ದಾಳಿಗೆ ರಾಷ್ಟ್ರ ರಾಜಧಾನಿ ತತ್ತರಿಸಿ ಹೋಗಿದ್ದು, ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಬೆಡ್ ಗಳ ವ್ಯವಸ್ಥೆ ಮಾಡುವ ಉದ್ದೇಶದಿಂದ ದೆಹಲಿ ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಅಲ್ಪ ಪ್ರಮಾಣದ ಸೋಂಕು, ರೋಗ ಲಕ್ಷಣಗಳೇ ಇಲ್ಲದ ಸೋಂಕಿತರನ್ನು ಬಿಡುಗಡೆ ಮಾಡುವ ನಿರ್ಧಾರಕ್ಕೆ ಬಂದಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

ನವದೆಹಲಿ: ಕೊರೋನಾ ವೈರಸ್ ದಾಳಿಗೆ ರಾಷ್ಟ್ರ ರಾಜಧಾನಿ ತತ್ತರಿಸಿ ಹೋಗಿದ್ದು, ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಬೆಡ್ ಗಳ ವ್ಯವಸ್ಥೆ ಮಾಡುವ ಉದ್ದೇಶದಿಂದ ದೆಹಲಿ ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಅಲ್ಪ ಪ್ರಮಾಣದ ಸೋಂಕು, ರೋಗ ಲಕ್ಷಣಗಳೇ ಇಲ್ಲದ ಸೋಂಕಿತರನ್ನು ಬಿಡುಗಡೆ ಮಾಡುವ ನಿರ್ಧಾರಕ್ಕೆ ಬಂದಿದೆ.

ಹೌದು.. ಈ ಬಗ್ಗೆ ಸ್ವತಃ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮಾಹಿತಿ ನೀಡಿದ್ದು, ದೆಹಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಅಲ್ಪ ಪ್ರಮಾಣದ ಸೋಂಕಿನ ಲಕ್ಷಣಗಳಿರುವ ಸೋಂಕಿತರು ಮತ್ತು ರೋಗ ಲಕ್ಷಣಗಳೇ ಇಲ್ಲದ ಕೊರೋನಾ ಸೋಂಕಿತರನ್ನು 24 ಗಂಟೆಗಳಲ್ಲಿ ಡಿಸ್ಚಾರ್ಜ್ ಮಾಡಲಾಗುತ್ತದೆ. ಅವರ ಸ್ಥಾನಕ್ಕೆ ಗಂಭೀರ ಅಥವಾ ತೀವ್ರ ರೋಗಲಕ್ಷಣಗಳಿರುವ ರೋಗಿಗಳನ್ನು ಆಸ್ಪತ್ರೆಗೆ ಸೇರಿಸಲಾಗುತ್ತದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ದೆಹಲಿಯಲ್ಲಿ ರೋಗಿಗಳಿಗೆ ಬೆಡ್ ಗಳ ತೀವ್ರ ಸಮಸ್ಯೆ ಎದುರಾಗಿದೆ. ಅತ್ತ ಖಾಸಗಿ ಆಸ್ಪತ್ರೆಗಳು ದುಬಾರಿ ಹಣ ಕೇಳುತ್ತಿರುವುದರಿಂದ ಜನ ಸರ್ಕಾರಿ ಆಸ್ಪತ್ರೆಗಳತ್ತ ಮುಖ ಮಾಡಿದ್ದಾರೆ. ಹೀಗಾಗಿ ಸರ್ಕಾರಿ ಆಸ್ಪತ್ರೆಗಳು ಭರ್ತಿಯಾಗಿದ್ದು, ಹೊಸ ರೋಗಿಗಳಿಗೆ ಅವಕಾಶ ನೀಡಲೂ ಸಾಧ್ಯವಾಗಷ್ಟು ಮಟ್ಟಿಗೆ ಪರಿಸ್ಥಿತಿ ಬಿಗಡಾಯಿಸಿದೆ. ಇದೇ ಕಾರಣಕ್ಕೆ ದೆಹಲಿ ಸರ್ಕಾರ ಅಲ್ಪ ಪ್ರಮಾಣದ ಸೋಂಕಿನ ಲಕ್ಷಣಗಳಿರುವ ಸೋಂಕಿತರು ಮತ್ತು ರೋಗ ಲಕ್ಷಣಗಳೇ ಇಲ್ಲದ ಕೊರೋನಾ ಸೋಂಕಿತರನ್ನು 24 ಗಂಟೆಗಳಲ್ಲಿ ಡಿಸ್ಚಾರ್ಜ್ ಮಾಡಲು ಮುಂದಾಗಿದೆ.

ಹೀಗೆ ಬಿಡುಗಡೆಯಾದ ರೋಗಿಗಳು ಕಡ್ಡಾಯವಾಗಿ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದ್ದು, ತಪ್ಪಿದರೆ ಕಠಿಣ ಶಿಕ್ಷೆ ಜಾರಿಗೊಳಿಸುವ ಎಚ್ಚರಿಕೆ ನೀಡಿದೆ. ಒಂದು ವೇಳೆ ಮನೆಯಲ್ಲಿ ಚಿಕಿತ್ಸೆ ಸಾಧ್ಯವಾಗದಿದ್ದರೆ. ಸ್ಥಳೀಯ ಕೋವಿಡ್ ಚಿಕಿತ್ಸಾ ಸೆಂಟರ್ ಗಳಿಗೆ ರವಾನೆ ಮಾಡುವುದಾಗಿ ದೆಹಲಿ ಸರ್ಕಾರದ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಪದ್ಮಿನಿಸಿಂಗ್ಲಾ ಹೇಳಿದ್ದಾರೆ. 

ಹಾಸಿಗೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ
ದೆಹಲಿಯಲ್ಲಿ ಕೆಲವು ಆಸ್ಪತ್ರೆಗಳು ಮಾಫಿಯಾ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಇಂತಹ ಮಾಫಿಯಾವನ್ನು ಮುರಿಯಲು ಸಮಯಾವಕಾಶ ಬೇಕು. ಕೆಲವರಿಗೆ ರಾಜಕೀಯ ಮುಖಂಡರ ಪರಿಚಯವಿದೆ. ಇವರು ತಮ್ಮನ್ನು ಉಳಿಸಬಹುದು ಎಂಬ ಭ್ರಮೆಯಲ್ಲಿ ಈ ಮಾಫಿಯಾಗಳು ಕಾರ್ಯ ನಿರ್ವಹಿಸುತ್ತಿವೆ. ಆದರೆ, ಕಾನೂನಿನ ಕುಣಿಕೆಯಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಎಚ್ಚರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com