ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ಸಿಎಂ ಕೇಜ್ರಿವಾಲ್

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಎಚ್ಚರಿಕೆ ನೀಡಿದ್ದಾರೆ. 
ಸಿಎಂ ಅರವಿಂದ ಕೇಜ್ರಿವಾಲ್
ಸಿಎಂ ಅರವಿಂದ ಕೇಜ್ರಿವಾಲ್

ನವದೆಹಲಿ: ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಎಚ್ಚರಿಕೆ ನೀಡಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಕೆಲ ಆಸ್ಪತ್ರೆಗಳು ನಿರಾಕರಿಸುತ್ತಿವೆ ಎಂಬ ಮಾಹಿತಿ ಬಂದಿದೆ. ಆಸ್ಪತ್ರೆಗಳಲ್ಲಿರುವ ಹಾಸಿಗೆಗಳನ್ನು ಬ್ಲಾಕ್ ಮಾರ್ಕೆಟ್ ಮಾಡುತ್ತಿರುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಈ ಮೂಲಕ ಎಚ್ಚರಿಸುತ್ತಿದ್ದಾರೆ.

ಶೀಘ್ರದಲ್ಲೇ ಖಾಸಗಿ ಆಸ್ಪತ್ರೆಗಳ ಇಂತಹ ವರ್ತನೆಗಳಿಗೆ ಕಡಿವಾಣ ಹಾಕಲಾಗುತ್ತದೆ ಎಂದು ಈ ಮೂಲಕ ಜನರಿಗೆ ಭರವಸೆಯನ್ನು ನೀಡುತ್ತಿದ್ದೇನೆ. ಕೆಲ ಖಾಸಗಿ ಆಸ್ಪತ್ರೆಗಳು ಸೋಂಕಿತರನ್ನು ದಾಖಲು ಮಾಡಿಕೊಳ್ಳಲು ದುಪ್ಪಟ್ಟು ಹಣ ಪಡೆಯುತ್ತಿರುವುದಾಗಿ ಹಾಗೂ ಕೆಲವು ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸುತ್ತಿರುವ ಮಾಹಿತಿಗಳು ಬಂದಿವೆ. ಇದು ನ್ಯಾಯಯುತವಲ್ಲ. ಇಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಪರೀಕ್ಷಾ ಸಾಮರ್ಥ್ಯದ ಕುರಿತು ಮಾತನಾಡಿರುವ ಅವರು, ದೇಶದ ನಡೆಯುತ್ತಿರುವ ಗರಿಷ್ಠ ಸಂಖ್ಯೆಯ ಪರೀಕ್ಷೆಗಳು ದೆಹಲಿಯಲ್ಲಿ ನಡೆಯುತ್ತಿವೆ. ಇಷ್ಟು ಸಂಖ್ಯೆಯಲ್ಲಿ ಯಾವುದೇ ರಾಜ್ಯ ಕೂಡ ಪರೀಕ್ಷೆ ನಡೆಸುತ್ತಿಲ್ಲ. ಲಕ್ಷಣ ಇಲ್ಲದ ಜನರು ಪರೀಕ್ಷೆ ಮಾಡಿಸಿಕೊಳ್ಳುವುದನ್ನು ನಿಯಂತ್ರಿಸಬೇಕಿದೆ. ಎಲ್ಲರಿಗೂ ಪರೀಕ್ಷೆ ಮಾಡುವುದು ಅಸಾಧ್ಯಕರ. ಪ್ರತೀಯೊಬ್ಬರೂ ಪರೀಕ್ಷೆ ಮಾಡಿಸಿಕೊಳ್ಳಲು ಮುಂದಾದರೆ ವ್ಯವಸ್ಥೆ ಕುಸಿದು ಬೀಳಲಿದೆ. 

ಇದರಿಂದ ಲಕ್ಷಣ ಇರುವವರಿಗೆ ಪರೀಕ್ಷೆ ನಡೆಸಲು ಸಾಧ್ಯವಾಗದೇ ಹೋಗಬಹುದು. ಉಸಿರಾಟ ಸಮಸ್ಯೆ ಹಾಗೂ ಹೆಚ್ಚಿನ ಜ್ವರ ಇರುವವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿದೆ. ಇಂತಹವರನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಹಾಗೂ ಕೊರೋನಾ ಪರೀಕ್ಷೆ ಕಡ್ಡಾಯಗೊಳಿಸಬಾರದು ಎಂಬುದರ ಕುರಿತು ಶೀಘ್ರದಲ್ಲಿಯೇ ಆದೇಶ ಕೂಡ ಹೊರಡಿಸಲಾಗುತ್ತದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com