ದೆಹಲಿ, ಮಹಾರಾಷ್ಟ್ರದಲ್ಲಿ ಕೊವಿಡ್-19 ಪರೀಕ್ಷೆಗೆ ಒಳಗಾಗುವ ಐವರಲ್ಲಿ ಒಬ್ಬರಿಗೆ ಪಾಸಿಟಿವ್!

ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಕಳೆದ ಒಂದು ವಾರದಿಂದ ಕೊವಿಡ್ -19 ಪರೀಕ್ಷೆಗೆ ಒಳಪಟ್ಟಿರುವ ಐವರಲ್ಲಿ ಒಬ್ಬರಿಗೆ ಪಾಸಿಟಿವ್ ಬರುತ್ತಿದ್ದು, ಈ ಎರಡು ರಾಜ್ಯಗಳಲ್ಲಿ ನ್ಯೂಯಾರ್ಕ್ ಮಾದರಿಯಲ್ಲಿ ಸೋಂಕು ವ್ಯಾಪಿಸುತ್ತಿದೆ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. ಕಳೆದ ಮಾರ್ಚ್ ನಲ್ಲಿ ನ್ಯೂಯಾರ್ಕ್ ಜಗತ್ತಿನಲ್ಲಿಯೇ ಅತಿ ಹೆಚ್ಚು ಕೊರೋನಾ ಪೀಡಿತ ನಗರವಾಗಿತ್ತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಕಳೆದ ಒಂದು ವಾರದಿಂದ ಕೊವಿಡ್ -19 ಪರೀಕ್ಷೆಗೆ ಒಳಪಟ್ಟಿರುವ ಐವರಲ್ಲಿ ಒಬ್ಬರಿಗೆ ಪಾಸಿಟಿವ್ ಬರುತ್ತಿದ್ದು, ಈ ಎರಡು ರಾಜ್ಯಗಳಲ್ಲಿ ನ್ಯೂಯಾರ್ಕ್ ಮಾದರಿಯಲ್ಲಿ ಸೋಂಕು ವ್ಯಾಪಿಸುತ್ತಿದೆ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. ಕಳೆದ ಮಾರ್ಚ್ ನಲ್ಲಿ ನ್ಯೂಯಾರ್ಕ್ ಜಗತ್ತಿನಲ್ಲಿಯೇ ಅತಿ ಹೆಚ್ಚು ಕೊರೋನಾ ಪೀಡಿತ ನಗರವಾಗಿತ್ತು.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಅಧೀನದಲ್ಲಿರುವ ರಾಷ್ಟ್ರೀಯ ಸಾಂಕ್ರಾಮಿಕ ರೋಗ ಸಂಸ್ಥೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಕಳೆದ ಒಂದು ವಾರದಿಂದ ಮಹಾರಾಷ್ಟ್ರದಲ್ಲಿ ಕೊವಿಡ್-19 ಪಾಸಿಟಿವ್ ಪ್ರಕರಣಗಳ ಪ್ರಮಾಣ ಶೇ. 20 ಕ್ಕಿಂತ ಹೆಚ್ಚಾಗಿದೆ, ಅಂದರೆ ಕೊವಿಡ್-19 ಪರೀಕ್ಷೆಗೆ ಒಳಗಾಗುತ್ತಿರುವ 100 ಮಂದಿಯ ಪೈಕಿ 20ಕ್ಕೂ ಹೆಚ್ಚು ಜನರಿಗೆ ಪಾಸಿಟಿವ್ ದೃಢಪಟ್ಟಿದೆ.

ಈ ರಾಜ್ಯಗಳಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಆಘಾತಕಾರಿಯಾಗಿ ಹೆಚ್ಚಾಗುತ್ತಿದ್ದು, ಇದು ರಾಷ್ಟ್ರೀಯ ಸರಾಸರಿಗಿಂತ ಮೂರು ಪಟ್ಟು ಹೆಚ್ಚಾಗಿದೆ. ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಕೊವಿಡ್ -19 ರೋಗಿಗಳಿಗೆ ಐಸಿಯು ವಾರ್ಡ್ ನಿರಾಕರಿಸಲಾಗುತ್ತಿದೆ ಎಂಬ ವರದಿಗಳು ಬರುತ್ತಿವೆ.

ಈ ರಾಜ್ಯಗಳಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರಿ ಏರಿಕೆಯಾಗುತ್ತಿದ್ದು, ಸಾಕಷ್ಟು ಪರೀಕ್ಷೆಗಳನ್ನು ನಡೆಸದಿದ್ದಲ್ಲಿ, ಮುಂದಿನ ದಿನಗಳಲ್ಲಿ ಪ್ರಕರಣಗಳ ಪ್ರಮಾಣವು ನಿರ್ವಹಿಸಲಾಗದಂತಹ ಸ್ಥಿತಿ ತಲುಪಬಹುದು ಎಂದು ಅನೇಕ ತಜ್ಞರು ಎಚ್ಚರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com