ತಮಿಳುನಾಡಿನಲ್ಲಿ ಒಂದೇ ದಿನ ದಾಖಲೆಯ 1,438 ಹೊಸ ಕೊರೋನಾ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 28,694ಕ್ಕೆ ಏರಿಕೆ

ತಮಿಳುನಾಡಿನಲ್ಲಿ ಒಂದೇ ದಿನದಲ್ಲಿ ದಾಖಲೆ 1,438 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 28,694 ಕ್ಕೆ ತಲುಪಿದೆ.

Published: 06th June 2020 12:22 AM  |   Last Updated: 06th June 2020 12:38 PM   |  A+A-


for representation purpose only

ಸಂಗ್ರಹ ಚಿತ್ರ

Posted By : Vishwanath S
Source : Online Desk

ಚೆನ್ನೈ: ತಮಿಳುನಾಡಿನಲ್ಲಿ ಒಂದೇ ದಿನದಲ್ಲಿ ದಾಖಲೆ 1,438 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 28,694 ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲೇ 12 ರೋಗಿಗಳು ಸಾಂಕ್ರಾಮಿಕ ರೋಗಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 232ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 861 ರೋಗಿಗಳನ್ನು ಚಿಕಿತ್ಸೆಯ ನಂತರ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಇದುವರೆಗೆ ಒಟ್ಟು 15,762 ಸೋಂಕಿತರನ್ನು ಗುಣಪಡಿಸಲಾಗಿದೆ ಎಂದು ಆರೋಗ್ಯ ಸಚಿವ ಸಿ ವಿಜಯಬಾಸ್ಕರ್ ಹೇಳಿದ್ದಾರೆ.

ಸದ್ಯ, ಪ್ರತ್ಯೇಕ ವಾರ್ಡ್‌ಗಳು ಸೇರಿದಂತೆ ಎಲ್ಲ ಆಸ್ಪತ್ರೆಗಳಲ್ಲಿ 12,697 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇವರೆಲ್ಲರೂ ಸಕ್ರಿಯ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ. ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಶೇ 54.93ರಷ್ಟಿದ್ದು, ಸಾವಿನ ಪ್ರಮಾಣ ಶೇ 0.80ರಷ್ಟಿದೆ. ಇದು ದೇಶದಲ್ಲೇ ಅತ್ಯಂತ ಕಡಿಮೆ ಎಂದು ಅವರು ಹೇಳಿದ್ದಾರೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Coronavirus Lockdown

ಕರ್ಫ್ಯೂ, ಭಾನುವಾರದ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಕೊರೋನಾ ಪ್ರಮಾಣ ತಗ್ಗಲಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
facebook twitter whatsapp