ದೇಶದಲ್ಲಿ ಕೊರೋನಾ ರಣಕೇಕೆ: ಒಂದೇ ದಿನ 9,971 ಮಂದಿಯಲ್ಲಿ ವೈರಸ್ ಪತ್ತೆ, 2.46 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 7 ಸಾವಿರ ಗಡಿಯತ್ತ ಸಾವಿನ ಸಂಖ್ಯೆ

ಕೊರೋನಾ ವೈರಸ್ ಅಟ್ಟಹಾಸ ದೇಶದಲ್ಲಿ ಮುಂದುವರೆದಿದ್ದು, ಒಂದೇ ದಿನ 9,971 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2.46 ಲಕ್ಷಕ್ಕೇರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕೊರೋನಾ ವೈರಸ್ ಅಟ್ಟಹಾಸ ದೇಶದಲ್ಲಿ ಮುಂದುವರೆದಿದ್ದು, ಒಂದೇ ದಿನ 9,971 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2.46 ಲಕ್ಷಕ್ಕೇರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. 

ಕಳೆದ 24 ಗಂಟೆಗಳಲ್ಲಿ 9,971 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,46,628ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸಾವಿನ ಸಂಖ್ಯೆ ಕೂಡ 7 ಗಡಿಯತ್ತ ಸಾಗಿದ್ದು, ಈ ವರೆಗೂ ಹೆಮ್ಮಾರಿ ವೈರಸ್'ಗೆ 6,929 ಮಂದಿ ಬಲಿಯಾಗಿದ್ದಾರೆ. 

ಇನ್ನು 2,46,628 ಮಂದಿ ಸೋಂಕಿತರ ಪೈಕಿ 1,15,942 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 1,14,072 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

ಕೊರೋನಾ ಹಾಟ್'ಸ್ಪಾಟ್ ಎಂದೇ ಕುಖ್ಯಾತಿ ಗಳಿಸುತ್ತಿರುವ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 27,654. ಮಹಾರಾಷ್ಟ್ರ 82,968, ತಮಿಳುನಾಡು 30,152, ಗುಜರಾತ್ 19,592ಕ್ಕೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com