ವಿಧಾನಸಭೆ ಚುನಾವಣೆ ಮೇಲೆ ಬಿಜೆಪಿ ಕಣ್ಣು: ಅಸ್ಸಾಂ ಸರ್ಕಾರದಿಂದ 46 ಸಾವಿರ ಗುತ್ತಿಗೆ ಶಿಕ್ಷಕರು 'ಖಾಯಂ'

ಮುಂದಿನ ವರ್ಷಾರಂಭದಲ್ಲಿ ನಡೆಯಲಿರುವ ಅಸ್ಸಾಂ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ನೇತೃತ್ವದ ಸರ್ಕಾರ, 46 ಸಾವಿರ ಗುತ್ತಿಗೆ ಶಿಕ್ಷಕರನ್ನು ಖಾಯಂಗೊಳಿಸುವ ಮೂಲಕ ಶಿಕ್ಷಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ.
ಹಿಮಂತ ಬಿಸ್ವಾ ಶರ್ಮಾ
ಹಿಮಂತ ಬಿಸ್ವಾ ಶರ್ಮಾ

ಗುವಾಹತಿ: ಮುಂದಿನ ವರ್ಷಾರಂಭದಲ್ಲಿ ನಡೆಯಲಿರುವ ಅಸ್ಸಾಂ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ನೇತೃತ್ವದ ಸರ್ಕಾರ, 46 ಸಾವಿರ ಗುತ್ತಿಗೆ ಶಿಕ್ಷಕರನ್ನು ಖಾಯಂಗೊಳಿಸುವ ಮೂಲಕ ಶಿಕ್ಷಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ.

ಒಟ್ಟು 46, 150 ಶಿಕ್ಷಕರನ್ನು ಸರ್ಕಾರಿ ಶಾಲೆಯ ಶಿಕ್ಷಕರನ್ನಾಗಿ ಖಾಯಂಗೊಳಿಸಲಾಗುತ್ತಿದೆ ಎಂದು ಅಸ್ಸಾಂ ಶಿಕ್ಷಣ ಸಚಿವ ಹಿಮಂತ ಬಿಸ್ವಾ ಶರ್ಮಾ ಅವರು ಹೇಳಿದ್ದಾರೆ.

"46,150 ಗುತ್ತಿಗೆ ಶಿಕ್ಷಕರ ಉದ್ಯೋಗವನ್ನು ಖಾಯಂಗೊಳಿಸಲಾಗಿದೆ ಎಂದು ನಾನು ಹೇಳುವುದಿಲ್ಲ, ಆದರೆ ಅವರು 60 ವರ್ಷ ನಿವೃತ್ತಿ ವಯಸ್ಸನ್ನು ತಲುಪುವವರೆಗೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ" ಎಂದು ಶರ್ಮಾ ಪತ್ರಕರ್ತರಿಗೆ ತಿಳಿಸಿದರು.

ಕಳೆದ ಎಂಟು ವರ್ಷಗಳಿಂದ ಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರು ಇನ್ನು ಮುಂದೆ ಸರ್ಕಾರಿ ಶಿಕ್ಷಕರಿಗೆ ಸಮಾನವಾದ ವೇತನ, ಭತ್ಯೆ ಹಾಗೂ ಇತರೆ ಸೌಲಭ್ಯಗಳನ್ನು ಪಡೆಯಲಿದ್ದಾರೆ. ಅವರಿಗೂ ಸಹ ಸಾಮಾನ್ಯ ರಜೆ, ಸಾಂದರ್ಭಿಕ ರಜೆ ಹಾಗೂ ಹೇರಿಗೆ ರಜೆಗಳು ಅನ್ವಯವಾಗಲಿವೆ ಎಂದು ಸಚಿವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com