ಶಾಲಾ ಪಠ್ಯಕ್ರಮ ಕಡಿಮೆ ಮಾಡಲು ಸರ್ಕಾರ ಚಿಂತನೆ; ಶಿಕ್ಷಕರು, ಶಿಕ್ಷಣ ತಜ್ಞರ ಸಲಹೆ ಕೇಳಿದ ಕೇಂದ್ರ

ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯಕ್ರಮ ಮತ್ತು ಕಲಿಕಾ ಸಮಯವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ ‘ನಿಶಾಂಕ್’ ಅವರು ಮಂಗಳವಾರ ಹೇಳಿದ್ದಾರೆ.
ರಮೇಶ್ ಪೋಖ್ರಿಯಾಲ್
ರಮೇಶ್ ಪೋಖ್ರಿಯಾಲ್

ನವದೆಹಲಿ: ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯಕ್ರಮ ಮತ್ತು ಕಲಿಕಾ ಸಮಯವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ ‘ನಿಶಾಂಕ್’ ಅವರು ಮಂಗಳವಾರ ಹೇಳಿದ್ದಾರೆ.

"ಪ್ರಸ್ತುತ ಸನ್ನಿವೇಶ ಗಮನದಲ್ಲಿಟ್ಟುಕೊಂಡು ಮತ್ತು ಪೋಷಕರು ಹಾಗೂ ಶಿಕ್ಷಕರಿಂದ ಸಾಕಷ್ಟು ಮನವಿಗಳು ಬಂದಿರುವುದರಿಂದ, ಮುಂಬರುವ ಶೈಕ್ಷಣಿಕ ವರ್ಷಕ್ಕೆ ಪಠ್ಯಕ್ರಮ ಮತ್ತು ಕಲಿಕಾ ಸಮಯವನ್ನು ಕಡಿಮೆ ಮಾಡುವ ಬಗ್ಗೆ ನಾವು ಆಲೋಚಿಸುತ್ತಿದ್ದೇವೆ" ಎಂದು ಪೋಖ್ರಿಯಾಲ್ ಅವರು ಟ್ವೀಟ್ ಮಾಡಿದ್ದಾರೆ.

ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಶಿಕ್ಷಣ ತಜ್ಞರಿಂದ ಸಲಹೆಗಳನ್ನು ಆಹ್ವಾನಿಸಿರುವ ಮಾನವ ಸಂಪನ್ಮೂಲ ಸಚಿವರು, ನಿಮ್ಮ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ #SyllabusForStudents2020 ನೊಂದಿಗೆ ಟ್ಯಾಗ್ ಮಾಡುವಂತೆ ಕೇಳಿಕೊಂಡಿದ್ದಾರೆ.

“ಎಲ್ಲಾ ಶಿಕ್ಷಕರು, ಶಿಕ್ಷಣ ತಜ್ಞರು ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ಎಂಎಚ್‌ಆರ್‌ಡಿ ಅಥವಾ ನನ್ನ ಟ್ವಿಟರ್ ಮತ್ತು ಫೇಸ್‌ಬುಕ್ ಪೇಜ್ ನಲ್ಲಿ #SyllabusForStudents2020 ನೊಂದಿಗೆ ಟ್ಯಾಗ್ ಮಾಡುವಂತೆ ನಾನು ಮನವಿ ಮಾಡಿಕೊಳ್ಳುತ್ತೇನೆ. ಪಠ್ಯಕ್ರಮ ಕಡಿಮೆ ಮಾಡುವ ನಿರ್ಧಾರ ತೆಗೆದುಕೊಳ್ಳುವಾಗ ನಿಮ್ಮ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತೇವೆ ಒಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com