ಕೊವಿಡ್-19: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವರದಿ ನೆಗಟಿವ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕೊವಿಡ್-19 ವರದಿ ನೆಗಟಿವ್ ಬಂದಿದೆ ಎಂದು ಆಮ್ ಆದ್ಮಿ ಪಕ್ಷ ಮಂಗಳವಾರ ತಿಳಿಸಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕೊವಿಡ್-19 ವರದಿ ನೆಗಟಿವ್ ಬಂದಿದೆ ಎಂದು ಆಮ್ ಆದ್ಮಿ ಪಕ್ಷ ಮಂಗಳವಾರ ತಿಳಿಸಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊರೋನಾ ತಪಾಸಣೆ ನಡೆಸಲಾಗಿತ್ತು. ಅವರ ವರದಿ ಇಂದು ಬಂದಿದ್ದು, ನೆಗಟಿವ್ ಇದೆ ಎಂದು ಆಪ್ ಶಾಸಕ ಹಾಗೂ ಪಕ್ಷದ ವಕ್ತಾರ ರಾಘವ್ ಚಡ್ಡಾ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಗಂಟಲು ನೋವು, ಜ್ವರದಿಂದ ಬಳಲುತ್ತಿದ್ದ ಕೇಜ್ರಿವಾಲ್ ಅವರಿಗೆ ಇಂದು ಬೆಳಗ್ಗೆ ಕೊರೋನಾ ತಪಾಸಣೆ ನಡೆಸಲಾಗಿತ್ತು. ಭಾನುವಾರ ಸಂಜೆ ಜ್ವರ ಕಾಣಿಸಿಕೊಂಡಿದ್ದರಿಂದ ಸೋಮವಾರ ಎಲ್ಲ ಸಭೆಗಳನ್ನು ರದ್ದು ಮಾಡಿ ಕ್ವಾರಂಟೈನ್​ನಲ್ಲಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com