ಕೊರೋನಾ ಎಫೆಕ್ಟ್: ತೆಲಂಗಾಣದಲ್ಲಿ 10ನೇ ತರಗತಿ ಪರೀಕ್ಷೆ ರದ್ದು, ಎಲ್ಲ ವಿದ್ಯಾರ್ಥಿಗಳೂ ಪಾಸ್!

ಮಾರಕ ಕೊರೋನಾ ವೈರಸ್ ದೇಶಾದ್ಯಂತ ಶಿಕ್ಷಣ ವ್ಯವಸ್ಥೆಯನ್ನೇ ತಲೆಕೆಳಗು ಮಾಡಿದ್ದು, ಇದೀಗ ತೆಲಂಗಾಣ ಸರ್ಕಾರ 10ನೇ ತರಗತಿ ಪರೀಕ್ಷೆ ರದ್ದು ಮಾಡಿ ಎಲ್ಲ ವಿದ್ಯಾರ್ಥಿಗಳನ್ನೂ ಸಾಮೂಹಿಕವಾಗಿ ತೇರ್ಗಡೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹೈದರಾಬಾದ್‌: ಮಾರಕ ಕೊರೋನಾ ವೈರಸ್ ದೇಶಾದ್ಯಂತ ಶಿಕ್ಷಣ ವ್ಯವಸ್ಥೆಯನ್ನೇ ತಲೆಕೆಳಗು ಮಾಡಿದ್ದು, ಇದೀಗ ತೆಲಂಗಾಣ ಸರ್ಕಾರ 10ನೇ ತರಗತಿ ಪರೀಕ್ಷೆ ರದ್ದು ಮಾಡಿ ಎಲ್ಲ ವಿದ್ಯಾರ್ಥಿಗಳನ್ನೂ ಸಾಮೂಹಿಕವಾಗಿ ತೇರ್ಗಡೆ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರು ಕೊರೋನಾ ವೈರಸ್‌ ವ್ಯಾಪಕವಾಗಿ ಹರಡುತ್ತಿರುವುದರಿಂದ ಯಾವುದೇ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸಿ ಮುಂದಿನ ತರಗತಿಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

‘10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಅವರ ಆಂತರಿಕ ಮೌಲ್ಯಮಾಪನ ಅಂಕಗಳ ಆಧಾರದ ಮೇಲೆ ಶ್ರೇಣಿ ನೀಡುವ ಮೂಲಕ ಮುಂದಿನ ತರಗತಿಗೆ ಬಡ್ತಿ ನೀಡಲು ನಿರ್ಧರಿಸಲಾಗಿದೆ.  ತೆಲಂಗಾಣದಲ್ಲಿ 10ನೇ ತರಗತಿಯ 5.35 ಲಕ್ಷ ವಿದ್ಯಾರ್ಥಿಗಳಿದ್ದು, ಎಲ್ಲರನ್ನೂ ತೇರ್ಗಡೆ ಮಾಡಲಾಗುವುದು. ಅಲ್ಲದೆ, ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳ ಬಗ್ಗೆ ಪರಿಸ್ಥಿತಿ ಅವಲೋಕಿಸಿ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಕಟಣೆ ತಿಳಿಸಿದೆ. 

ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com