ಬಾರಾಮುಲ್ಲಾ-ಹಂದ್ವಾರ ಹೆದ್ದಾರಿಯಲ್ಲಿ ಸ್ಫೋಟಕ ವಸ್ತುಗಳು ಪತ್ತೆ!

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು ಬಾರಾಮುಲ್ಲಾ-ಹಂದ್ವಾರ ಹೆದ್ದಾರಿಯಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ಮಂಗಳವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು ಬಾರಾಮುಲ್ಲಾ-ಹಂದ್ವಾರ ಹೆದ್ದಾರಿಯಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ಮಂಗಳವಾರ ತಿಳಿದುಬಂದಿದೆ. 

ರೋಡ್ ಓಪನಿಂದ ಪಾರ್ಟಿ (ಆರ್ಒಪಿ) ಸಿಬ್ಬಂದಿಗಳು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಈ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನಿಡಿದ್ದಾರೆ. 

ಇದೀಗ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ಹಿಂದೆ ಕೂಡ ಭದ್ರತಾ ಪಡೆಗಳು ಪುಲ್ವಾಮದಲ್ಲಿ ನಡೆಯಬೇಕಿದ್ದ ದೊಡ್ಡ ವಿಧ್ವಂಸಕ ಕೃತ್ಯವೊಂದನ್ನು ವಿಫಲಗೊಳ್ಳುವಂತೆ ಮಾಡಿತ್ತು. ವಾಹನವೊಂದಲ್ಲಿ ಸಾಗಿಸಲಾಗುತ್ತಿದ್ದ ಬರೋಬ್ಬರಿ 20ಕೆಜಿಗೂ ಅಧಿಕ ತೂಕದ ಸುಧಾರಿತ ಸ್ಫೋಟಕ ಸಾಧನಗಳನ್ನು ಭದ್ರತಾಪಡೆಗಳು ವಶಕ್ಕೆ ಪಡೆದುಕೊಂಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com