ಐಎಎಸ್ ಅಧಿಕಾರಿ ಪಿಎಗೆ ಸೋಂಕು ದೃಢ ಹಿನ್ನಲೆ ತೆಲಂಗಾಣ ಸಿಎಂ ಕಚೇರಿಗೂ ಕೊರೋನಾ ಭೀತಿ

ತೆಲಂಗಾಣದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರಕ್ಕೆ ಸ್ವತಃ ಮುಖ್ಯಮಂತ್ರಿಗಳ ಕಚೇರಿಯೇ ತಲ್ಲಣಿಸಿದ್ದು, ಸಿಎಂ ಕಚೇರಿಯ ಸಿಬ್ಬಂದಿಗೇ ಸೋಂಕು ಒಕ್ಕರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಹೈದರಾಬಾದ್: ತೆಲಂಗಾಣದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರಕ್ಕೆ ಸ್ವತಃ ಮುಖ್ಯಮಂತ್ರಿಗಳ ಕಚೇರಿಯೇ ತಲ್ಲಣಿಸಿದ್ದು, ಸಿಎಂ ಕಚೇರಿಯ ಸಿಬ್ಬಂದಿಗೇ ಸೋಂಕು ಒಕ್ಕರಿಸಿದೆ.

ತೆಲಂಗಾಣ ಸಿಎಂ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಐಎಎಸ್ ಅಧಿಕಾರಿಯ ಪಿಎಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಅವರ ಸಂಪರ್ಕದಲ್ಲಿದ್ದ ಇತರೆ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೆ ಇಡೀ ಸಿಎಂ ಕಚೇರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. 

ಇನ್ನು ತೆಲಂಗಾಣದಲ್ಲಿ ಸೋಂಕಿತರ ಸಂಖ್ಯೆ 3,650ಕ್ಕೆ ಏರಿಕೆಯಾಗಿದ್ದು, ಈ ಪೈಕಿ 1,742 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಅಲ್ಲದೆ ಈ ವರೆಗೂ 137 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com