ತಮಿಳುನಾಡಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು: ಸಿಎಂ ಪಳನಿಸ್ವಾಮಿ

ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚೆನ್ನೈ: ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

10 ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ, ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಿ ತಮಿಳುನಾಡು ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ನಿನ್ನೆಯಷ್ಟೇ ತೆಲಂಗಾಣ ಸರ್ಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದುಗೊಳಿಸಿತ್ತು.

ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯೂ ಸಹ ಏರುತ್ತಿದೆ. ನಿನ್ನೆ ಒಂದೇ ದಿನ 9,987 ಕೇಸ್ ಗಳು ದಾಖಲಾಗಿದೆ. ಶೇ,48.47 ಪ್ರಮಾಣದ ರೋಗಿಗಳು ಗುಣಮುಖರಾಗಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com