ಅಸ್ಸಾಂ ಅನಿಲ ಬಾವಿಯಲ್ಲಿ ಹೊತ್ತಿ ಉರಿಯುತ್ತಿರುವ ಬೆಂಕಿ: ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿ ಸಾವು

ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯಲ್ಲಿಯ ಬಾಗ್ಜನ್ ತೈಲ ಕ್ಷೇತ್ರದ ಅನಿಲ ಬಾವಿಯೊಂದರಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಈ ವೇಳೆ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆಂದು ಬುಧವಾರ ತಿಳಿದುಬಂದಿದೆ. 
ಅನಿಲ ಬಾವಿಯಲ್ಲಿ ಹೊತ್ತಿ ಉರಿಯುತ್ತಿರುವ ಬೆಂಕಿ
ಅನಿಲ ಬಾವಿಯಲ್ಲಿ ಹೊತ್ತಿ ಉರಿಯುತ್ತಿರುವ ಬೆಂಕಿ

ಗುವಾಹಟಿ: ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯಲ್ಲಿಯ ಬಾಗ್ಜನ್ ತೈಲ ಕ್ಷೇತ್ರದ ಅನಿಲ ಬಾವಿಯೊಂದರಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಈ ವೇಳೆ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆಂದು ಬುಧವಾರ ತಿಳಿದುಬಂದಿದೆ. 

ಅನಿಲ ಬಾವಿಯಲ್ಲಿ ಕಳೆದ 14 ದಿನಗಳಿಂದ ಅನಿಲ ಸೋರಿಕೆಯಾಗುತ್ತಿದೆ. ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಸಿಬ್ಬಂದಿಗಳು ಈ ಹಿಂದೆ ನಾಪತ್ತೆಯಾಗಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಇದೀಗ ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಭಾರತೀಯ ವಾಯುಪಡೆ ಹಾಗೂ ಸೇನಾಪಡೆಗಳನ್ನು ರವಾನಿಸಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳೂ ಕೂಡ ಕೈಜೋಡಿಸಿವೆ. ಪ್ಯಾರಾಮಿಲಿಟರಿ ಪಡೆಗಳೂ ಘಟನಾ ಪ್ರದೇಶವನ್ನು ಸುತ್ತುವರೆದಿದ್ದು, ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿದುಬಂದಿದೆ. 

ಈ ನಡುವೆ ಅನಿಲ ಸೋರಿಕೆಯನ್ನು ನಿಯಂತ್ರಿಸುವ ಸಲುವಾಗಿ ಸಿಂಗಾಪುರದ ತಜ್ಞರ ಹಾಗೂ ಸ್ಥಳೀಯ ಎಂಜಿನಿಯರ್ ಗಳ ತಂಡವು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ವೇಳೆಯೇ ಬೆಂಕಿ ಹೊತ್ತಿ ಉರಿಯಲು ಆರಂಬಿಸಿದೆ. ಬೆಂಕಿಯ ಕೆನ್ನಾಲಿಗೆ ಬಹಳ ಎತ್ತರದವರೆಗೂ ವ್ಯಾಪಿಸಿದ್ದು, ಸುಮಾರು 10 ಕಿ.ಮೀ ದೂರದಿಂದಲೂ ಬೆಂಕಿ ಉರಿಯುತ್ತಿರುವುದು ಕಾಣಿಸುತ್ತಿದೆ ಎಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com