ಭಾರತೀಯ ಯೋಧರ ಭರ್ಜರಿ ಬೇಟೆ: 5 ಹಿಜ್ಬುಲ್‌, ಲಷ್ಕರ್ ತೊಯ್ಬಾ ಉಗ್ರರನ್ನು ಹೊಡೆದುರುಳಿಸಿದ ಸೇನೆ

ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಸೇರಿದಂತೆ ಐವರು ಉಗ್ರರು ಹತರಾಗಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ

ಶ್ರೀನಗರ: ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಸೇರಿದಂತೆ ಐವರು ಉಗ್ರರು ಹತರಾಗಿದ್ದಾರೆ.

ಈ ಮಧ್ಯೆ, ವದಂತಿಗಳನ್ನು ತಡೆಯಲು ಈ ಪ್ರದೇಶದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಐವರು ಉಗ್ರರ ಹತ್ಯೆಯೊಂದಿಗೆ  ಕಳೆದ ಎರಡು ವಾರಗಳಲ್ಲಿ ಒಟ್ಟು 27 ಉಗ್ರರನ್ನು ಭದ್ರತಾ ಪಡೆಗಳು ಕೊಂದಿವೆ. 

ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯನ್ನಾಧರಿಸಿ ಬುಧವಾರ ಮುಂಜಾನೆ 1 ಗಂಟೆ 45 ನಿಮಿಷಕ್ಕೆ ಜಮ್ಮು-ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಜಿ), 44 ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ಮತ್ತು ಸಿಆರ್‌ಪಿಎಫ್‌ನ 178 ಬೆಟಾಲಿಯನ್ ಜಂಟಿಯಾಗಿ ಶೋಪಿಯಾನ್‌ನ ಸುಗೂ ಹಂದಮಾ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು ಎಂದು ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ರಾಜೇಶ್ ಕಲಿಯಾ ಯುಎನ್‌ಐಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com