ದೆಹಲಿಯಲ್ಲಿ ಕೊರೋನಾ ಆರ್ಭಟ: ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆ ಅಮಿತ್ ಶಾ ಭೇಟಿಯಾದ ಸಿಎಂ ಕೇಜ್ರಿವಾಲ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಕೊರೋನಾ ಪರಿಸ್ಥಿತಿ ಕುರಿತು ಮಾತುಕತೆ ನಡೆಸಿದ್ದಾರೆಂದು ಗುರುವಾರ ತಿಳಿದುಬಂದಿದೆ. 
ಕೇಜ್ರಿವಾಲ್
ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಕೊರೋನಾ ಪರಿಸ್ಥಿತಿ ಕುರಿತು ಮಾತುಕತೆ ನಡೆಸಿದ್ದಾರೆಂದು ಗುರುವಾರ ತಿಳಿದುಬಂದಿದೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಗೌರವಾನ್ವಿತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಡಿದ್ದೆ. ಭೇಟಿ ವೇಳೆ ದೆಹಲಿಯಲ್ಲಿನ ಕೊರೋನಾ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದೇವೆ. ಮಾತುಕತೆ ವೇಳೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆಯನ್ನು ನೀಡಿದ್ದಾರೆಂದು ತಿಳಿಸಿದ್ದಾರೆ. 

ಭೇಟಿ ಕುರಿತು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ರಾಷ್ಟ್ರರಾಜಧಾನಿಯಲ್ಲಿ ಕೊರೋನಾ ಪರಿಸ್ಥಿತಿ ಕುರಿತು ಉಭಯ ನಾಯಕರು ಸುದೀರ್ಘ ಚರ್ಚೆ ನಡೆಸಿದರು ಎಂದು ತಿಳಿಸಿದ್ದಾರೆ. 

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಕೇಜ್ರಿವಾಲ್ ಅವರು, ಜುಲೈ.31ರೊಳಗೆ ದೆಹಲಿಗೆ 1.5 ಲಕ್ಷ ಹಾಸಿಗೆಗಳ ಅಗತ್ಯ ಬೀಳಲಿದೆ. ರಾಷ್ಟ್ರರಾಜಧಾನಿಗೆ ಇತರೆ ರಾಜ್ಯ ಹಾಗೂ ದೇಶಗಳಿಂದ ಬಂದಿಳಿಯುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗಲಿದೆ ಎಂದಿದ್ದರು. 

ಅಲ್ಲದೆ, ಇದೇ ವೇಳೆ ದೆಹಲಿ ಆಸ್ಪತ್ರೆಗಳು ದೆಹಲಿ ಜನತೆಗಷ್ಟೇ ಸೀಮಿತ ಎಂಬ ಆದೇಶವನ್ನು ತಿರಸ್ಕರಿಸಿದ್ದ ರಾಜ್ಯಪಾಲ ನಡೆ ಕುರಿತು ಪ್ರತಿಕ್ರಿಯೆ ನೀಡಿ, ವಾದ ಹಾಗೂ ವಿರೋಧ ವ್ಯಕ್ತಪಡಿಸಲು ಇದು ಸಮಯವಲ್ಲ. ರಾಜ್ಯಪಾಲರ ಪ್ರತೀ ಆದೇಶವನ್ನು ಪಾಲನೆ ಮಾಡಲಾಗುತ್ತದೆ ಎಂದು ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com