ಟಿಟಿಡಿ ಸಿಬ್ಬಂದಿಯಲ್ಲಿ ಕೊರೋನಾ ಪಾಸಿಟಿವ್: ತಿರುಪತಿ ಶ್ರೀ ಗೋವಿಂದರಾಜ ಸ್ವಾಮಿ ದೇಗುಲ ಬಂದ್
ಟಿಟಿಡಿ ಸಿಬ್ಬಂದಿಯೊಬ್ಬರಲ್ಲಿ ಕೊರೋನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ತಿರುಪತಿ ಶ್ರೀ ಗೋವಿಂದರಾಜ ಸ್ವಾಮಿ ದೇವಾಲಯವನ್ನು ಬಂದ್ ಮಾಡಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ.
Published: 12th June 2020 02:00 PM | Last Updated: 12th June 2020 02:00 PM | A+A A-

ಗೋವಿಂದರಾಜ ಸ್ವಾಮಿ ದೇಗುಲ
ತಿರುಪತಿ: ಟಿಟಿಡಿ ಸಿಬ್ಬಂದಿಯೊಬ್ಬರಲ್ಲಿ ಕೊರೋನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ತಿರುಪತಿ ಶ್ರೀ ಗೋವಿಂದರಾಜ ಸ್ವಾಮಿ ದೇವಾಲಯವನ್ನು ಬಂದ್ ಮಾಡಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಸಿಬ್ಬಂದಿಯಲ್ಲಿ ವೈರಸ್ ದೃಢಪಡುತ್ತಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ಟಿಟಿಡಿ ದೇವಾಲಯವನ್ನು ಬಂದ್ ಮಾಡುವಂತೆ ಆದೇಶಿಸಿದೆ. ಜೂನ್.13 ಮತ್ತು 13 ಎರಡು ದಿನಗಳ ಕಾಲ ದೇವಾಲಯವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡುವ ಕಾರ್ಯಗಳನ್ನು ಮಾಡಲಾಗುತ್ತಿದ್ದು, ಜೂನ್.14ರ ಬಳಿಕ ದೇವಾಲಯದ ಬಾಗಿಲನ್ನು ತೆರೆಯುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದೇವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಯಾನಿಟೈಸ್ ಇನ್ಸ್ ಪೆಕ್ಟರ್ ಒಬ್ಬರು ಅನಾರೋಗ್ಯಕ್ಕೀಡಾಗಿದ್ದರು. ಬಳಿಕ ಅವರನ್ನು ಟಿಟಿಡಿ ಕೇಂದ್ರೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅವರಲ್ಲಿ ವೈರಸ್ ದೃಢಪಟ್ಟಿದೆ ಎಂದು ಟಿಟಿಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದೀಗ ವ್ಯಕ್ತಿಯನ್ನು ಕೊರೋನಾ ಚಿಕಿತ್ಸೆಗೆ ನಿಯೋಜಿಸಲಾಗಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರೊಂದಿಗೆ ಸಂಪರ್ಕದಲ್ಲಿದ್ದ ಇಬ್ಬರು ಕುಟುಂಬ ಸದಸ್ಯರು, ಟಿಟಿಡಿ ಸಿಬ್ಬಂದಿಗಳೂ ಸೇರಿ ಒಟ್ಟು 8 ಮಂದಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.