'ಮಹಾ ಮೈತ್ರಿ' ಸರ್ಕಾರದಲ್ಲಿ ಭಿನ್ನಭಿಪ್ರಾಯಗಳಿವೆ- ಕಾಂಗ್ರೆಸ್ ಮುಖಂಡ ಅಶೋಕ್ ಚವ್ಹಾಣ್ 

ಮಹಾರಾಷ್ಟ್ರದ ಮಹಾ ವಿಕಾಸ್ ಆಘಾಡಿ  ಮೈತ್ರಿ ಸರ್ಕಾರದಲ್ಲಿ ಹಲವು ಭಿನ್ನಾಭಿಪ್ರಾಯಗಳಿವೆ ಎಂಬುದನ್ನು ಒಪ್ಪಿಕೊಂಡಿರುವ ಕಾಂಗ್ರೆಸ್ ಮುಖಂಡ ಅಶೋಕ್ ಚವ್ಹಾಣ್ , ಈ ಸಂಬಂಧ ಸದ್ಯದಲ್ಲಿಯೇ ಶಿವಸೇನಾ ಮತ್ತು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಅಶೋಕ್ ಚವ್ಹಾಣ್ ಮತ್ತಿತರರು
ಕಾಂಗ್ರೆಸ್ ಮುಖಂಡ ಅಶೋಕ್ ಚವ್ಹಾಣ್ ಮತ್ತಿತರರು

ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಆಘಾಡಿ  ಮೈತ್ರಿ ಸರ್ಕಾರದಲ್ಲಿ ಹಲವು ಭಿನ್ನಾಭಿಪ್ರಾಯಗಳಿವೆ ಎಂಬುದನ್ನು ಒಪ್ಪಿಕೊಂಡಿರುವ ಕಾಂಗ್ರೆಸ್ ಮುಖಂಡ ಅಶೋಕ್ ಚವ್ಹಾಣ್ , ಈ ಸಂಬಂಧ ಸದ್ಯದಲ್ಲಿಯೇ ಶಿವಸೇನಾ ಮತ್ತು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.

ಹೌದು. ಮಹಾ ಮೈತ್ರಿ ಸರ್ಕಾರ ಮತ್ತು ಅಧಿಕಾರಿಗಳ ನಡುವೆ ಅನೇಕ ಭಿನ್ನಾಭಿಪ್ರಾಯಗಳಿವೆ. ಈ ಸಂಬಂಧ ಮುಖ್ಯಮಂತ್ರಿ ಜೊತೆಗೆ ಚರ್ಚೆ ನಡೆಸುತ್ತೇವೆ. ಮುಖ್ಯಮಂತ್ರಿ ಭೇಟಿಗೆ ಪ್ರಯತ್ನಿಸುತ್ತಿದ್ದೇವೆ. ನಂತರ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತೇವೆ. ಮುಂದಿನ ಒಂದೆರಡು ದಿನಗಳಲ್ಲಿ ಭೇಟಿಯಾಗುವ ಸಾಧ್ಯತೆ ಇರುವುದಾಗಿ ಚವ್ಹಾಣ್ ಹೇಳಿದರು. 

ಇದಕ್ಕೂ ಮುಂಚೆ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಸಚಿವ ಬಾಬಾ ಸಾಹೇಬ್  ಥೊರಾಟ್ ಕೂಡಾ ಇದೇ ರೀತಿ ಹೇಳಿಕೆ ನೀಡಿದ್ದರು. ಅನೇಕ ಭಿನ್ನಾಭಿಪ್ರಾಯಗಳಿವೆ. ಮೈತ್ರಿ ಪಕ್ಷದೊಂದಿಗೆ ಮಾತುಕತೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಆದರೆ, ಸರ್ಕಾರ ನಿರ್ಧಾರ ಕೈಗೊಳ್ಳುವಾಗ ಕಾಂಗ್ರೆಸ್ ಪಕ್ಷವನ್ನು ಪರಿಗಣಿಸಬೇಕು ಎಂದು ಹೇಳಿದ್ದರು. 

ಶಿವಸೇನೆ ಬೆಂಬಲ ನೀಡಿರುವ ಕಾಂಗ್ರೆಸ್ ಪಕ್ಷ ತನ್ನ ನಿರ್ಧಾರದ ಬಗ್ಗೆ ಮರು ಪರಿಶೀಲಿಸಬೇಕಾಗಿದೆ ಎಂದು ಶನಿವಾರ ರಿಪಬ್ಲಿಕ್ ಫಾರ್ಟಿ ಆಫ್ ಇಂಡಿಯಾ ಮುಖಂಡ ರಾಮದಾಸ್ ಅಠಾವಳೆ ಹೇಳಿಕೆ ನೀಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com