ಪಾಕ್ ಸೇನೆಯಿಂದ ಗುಂಡಿನ ದಾಳಿ: ಓರ್ವ ಭಾರತೀಯ ಸೈನಿಕ ಹುತಾತ್ಮ,ಇಬ್ಬರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ಪಾಕಿಸ್ತಾನ ಸೇನೆ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಸೈನಿಕ ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Published: 14th June 2020 10:59 AM  |   Last Updated: 14th June 2020 10:59 AM   |  A+A-


Casual_Image1

ಸಾಂದರ್ಭಿಕ ಚಿತ್ರ

Posted By : nagaraja
Source : PTI

ಪೊಂಛ್: ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ಪಾಕಿಸ್ತಾನ ಸೇನೆ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಸೈನಿಕ ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೊಂಛ್ ಮತ್ತು ರಜೌರಿ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಪಾಕಿಸ್ತಾನ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ  ಮೃತಪಟ್ಟ ಸೈನಿಕರಲ್ಲಿ ಇವರು ಮೂರನೇಯವರಾಗಿದ್ದಾರೆ. ಷಹಪುರ್ - ಕರ್ನಿ ಸೆಕ್ಟರ್ ನ ಗಡಿಯುದ್ದಕ್ಕೂ ಶನಿವಾರ ರಾತ್ರಿ ಪಾಕಿಸ್ತಾನ ಸೈನಿಕರು ಗುಂಡು ಹಾಗೂ ಶೆಲ್ ದಾಳಿ ನಡೆಸಿದ್ದು, ಭಾರತೀಯ ಸೇನೆಯಿಂದ ತಕ್ಕ ಪ್ರತ್ಯುತ್ತರ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಪಾಕಿಸ್ತಾನ ಸೈನಿಕರು ನಡೆಸಿದ ದಾಳಿಯಲ್ಲಿ ಗಾಯಗೊಂಡಿದ್ದ ಮೂವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಯಿತಾದರೂ ಗಾಯಾಳುಗಳ ಪೈಕಿ ಒಬ್ಬರು ಮೃತಪಟ್ಟಿರುವುದಾಗಿ ಅವರು ತಿಳಿಸಿದ್ದಾರೆ. ಪ್ರತ್ಯುತ್ತರ ನೀಡುವ ಕಾರ್ಯದಲ್ಲಿ  ಪಾಕಿಸ್ತಾನ ಸೈನಿಕರಿಂದ ಆಗಿರುವ ಸಾವು ನೋವಿನ ಬಗ್ಗೆ ಯಾವುದೇ ಮಾಹಿತಿ ತಿಳಿದಿಲ್ಲ ಎಂದು ಹೇಳಿದ್ದಾರೆ. 

ರಜೌರಿ ಜಿಲ್ಲೆಯಲ್ಲಿ ಜೂನ್ 4 ರಂದು ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಹವಲ್ದಾರ್ ಪಿ. ಮಥಿಯಾಜಗನ್  ಎಂಬವರು ಹುತಾತ್ಮರಾಗಿದ್ದರು. ಜೂನ್ 10 ರಂದು ನಾಯಕ್ ಗುರುಚರಣ್ ಸಿಂಗ್ ಪ್ರಾಣತೆತ್ತಿದ್ದರು.
 

Stay up to date on all the latest ರಾಷ್ಟ್ರೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp