ತೊಂದರೆ ಕೊಡಬೇಡಿ; ಏಕಪಕ್ಷೀಯ ಕ್ರಮ ಸರಿಯಲ್ಲ: ಭಾರತಕ್ಕೆ ಚೀನಾ ಎಚ್ಚರಿಕೆ

ಪೂರ್ವ ಲಡಾಕ್ ನಲ್ಲಿ ನಿನ್ನೆ ರಾತ್ರಿ ಕರ್ನಲ್ ಸೇರಿದಂತೆ ಮೂವರು ಭಾರತೀಯ ಯೋಧರನ್ನು ಹತ್ಯೆಗೈದ ಬಳಿಕ, ಏಕಪಕ್ಷೀಯ ಕ್ರಮಗಳನ್ನು ಕೈಗೊಳ್ಳದಂತೆ ಅಥವಾ ತೊಂದರೆ ಕೊಡದಂತೆ  ಚೀನಾ ವಿದೇಶಾಂಗ ಸಚಿವಾಲಯ ಭಾರತಕ್ಕೆ ಎಚ್ಚರಿಕೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಡಾಖ್: ಪೂರ್ವ ಲಡಾಕ್ ನಲ್ಲಿ ನಿನ್ನೆ ರಾತ್ರಿ ಕರ್ನಲ್ ಸೇರಿದಂತೆ ಮೂವರು ಭಾರತೀಯ ಯೋಧರನ್ನು ಹತ್ಯೆಗೈದ ಬಳಿಕ, ಏಕಪಕ್ಷೀಯ ಕ್ರಮಗಳನ್ನು ಕೈಗೊಳ್ಳದಂತೆ ಅಥವಾ ತೊಂದರೆ ಕೊಡದಂತೆ ಚೀನಾ ವಿದೇಶಾಂಗ ಸಚಿವಾಲಯ ಭಾರತಕ್ಕೆ ಎಚ್ಚರಿಕೆ ನೀಡಿದೆ.

ಸೋಮವಾರ ಮಧ್ಯ ರಾತ್ರಿ ಗಾಲ್ವಾನಾ ಕಣಿವೆಯಲ್ಲಿ ಚೀನಾ ಯೋಧರ ನಡುವಿನ ಸಂಘರ್ಷದಲ್ಲಿ  ಒಬ್ಬರು ಸೇನಾ ಅಧಿಕಾರಿ ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ಹೇಳಿಕೆ ಬೆನ್ನಲ್ಲೇ, ಚೀನಾ ವಿದೇಶಾಂಗ ಸಚಿವಾಲಯ ಈ ರೀತಿಯ ಪ್ರತಿಕ್ರಿಯೆ ನೀಡಿದೆ ಎಂಬುದನ್ನು ರಾಯ್ಟರ್ಸ್ ಉಲ್ಲೇಖಿಸಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. 

ಗಾಲ್ವಾನ್ ಕಣಿವೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವಂತೆ ಸೋಮವಾರ ರಾತ್ರಿ ಓರ್ವ ಅಧಿಕಾರಿ ಸೇರಿದಂತೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಗಾಲ್ವಾನ್ ಕಣಿವೆಯಲ್ಲಿ ಪರಿಸ್ಥಿತಿ ಬಿಗಡಾಯಿಸದಂತೆ ಭಾರತ ಹಾಗೂ ಚೀನಾದ ಹಿರಿಯ ಮಿಲಿಟರಿ ಅಧಿಕಾರಿಗಳು ಸಭೆ ನಡೆಸುತ್ತಿರುವುದಾಗಿ ಸೇನಾಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಐದು ವಾರದಿಂದಲೂ ಗಾಲ್ವಾನ್ ಕಣಿವೆಯಲ್ಲಿ ಉಭಯ ರಾಷ್ಟ್ರಗಳು ಹೆಚ್ಚಿನ ಸಂಖ್ಯೆಯ ಸೇನಾ ಜಮಾವಣೆ ಮಾಡುವ ಮೂಲಕ ಪರಿಸ್ಥಿತಿ ಬಿಗಡಾಯಿಸಿತ್ತು. ಗಾಲ್ವಾನ್ ಕಣಿವೆಯಿಂದ ಎರಡು ಕಡೆಯ ಯೋಧರು ಹೊರಹೋಗಲು ನಿರ್ಧರಿಸಿದ್ದಾರೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರಾವಣೆ ಹೇಳಿಕೆ ನೀಡಿದ್ದ ಬೆನ್ನಲ್ಲೇ ಮೂವರು ಭಾರತೀಯ ಯೋಧರ ಹತ್ಯೆ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com