ಕೊರೋನಾಗೆ ಉಚಿತ ಚಿಕಿತ್ಸೆ ಕೋರಿ ಪಿಐಎಲ್: ಸಾಮಾಜಿಕ ಕಾರ್ಯಕರ್ತನಿಗೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಕೊರೋನಾ ವೈರಸ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಬಾಂಬೆ ಹೈಕೋರ್ಟ್ ಬರೋಬ್ಬರಿ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ಕೊರೋನಾ ವೈರಸ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಬಾಂಬೆ ಹೈಕೋರ್ಟ್ ಬರೋಬ್ಬರಿ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಖಾಸಗಿ ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲೂ ಕೊವಿಡ್-19 ಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸಾಗರ್ ಜೊಂಡೇಲ್ ಅವರು ಪಿಐಎಲ್ ಸಲ್ಲಿಸಿದ್ದರು. ಅಲ್ಲದೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳ ಬೆಡ್ ಚಾರ್ಜ್ ನಿಗದಿಪಡಿಸಿರುವ ರಾಜ್ಯ ಸರ್ಕಾರ ನಿರ್ಧಾರವನ್ನು ನ್ಯಾಯಾಲಯ ರದ್ದುಗೊಳಿಸಬೇಕು. ಸರ್ಕಾರ ನಿಗದಿಪಡಿಸಿರುವ ದರಗಳು ಸಾಮಾನ್ಯ ಜನರು ಪಾವತಿಸುವ ಸಾಮರ್ಥ್ಯವನ್ನು ಮೀರಿದೆ ಎಂದು ಹೇಳಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಕೆ ಕೆ ತಟೆದ್ ಅವರ ವಿಭಾಗೀಯ ಪೀಠ, ಅರ್ಜಿದಾರರು ಕೇಳಿದ ಪ್ರಾರ್ಥನೆಯು "ಪೂರ್ವಭಾವಿ" ಎಂದು ಗಮನಿಸಿ, ಸರ್ಕಾರ ತೆಗೆದುಕೊಂಡ ನಿರ್ಧಾರ ಸೂಕ್ತವಾಗಿದೆ ಎಂದು ಹೇಳಿದೆ. 

ಪಿಐಎಲ್ ಅನ್ನು ವಜಾಗೊಳಿಸಿದ ನ್ಯಾಯಾಲಯವು, ಒಂದು ತಿಂಗಳಲ್ಲಿ 5 ಲಕ್ಷ ರೂ.ಗಳನ್ನು ರಾಜ್ಯ ಸರ್ಕಾರಕ್ಕೆ ಜಮಾ ಮಾಡುವಂತೆ ಅರ್ಜಿದಾರ ಜೊಂಡೇಲ್‌ಗೆ ನಿರ್ದೇಶನ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com