ಕೊರೋನಾ ವೈರಸ್ ಗೆ ಮಹಾವೀರ ಚಕ್ರ ಪ್ರಶಸ್ತಿ ವಿಜೇತ ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ವೊಹ್ರಾ ಬಲಿ

ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಮಹಾವೀರ ಚಕ್ರ ಪ್ರಶಸ್ತಿ ವಿಜೇತ ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ವೊಹ್ರಾ ಅವರು ನಿಧನರಾಗಿದ್ದಾರೆ.
ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ವೊಹ್ರಾ
ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ವೊಹ್ರಾ

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಮಹಾವೀರ ಚಕ್ರ ಪ್ರಶಸ್ತಿ ವಿಜೇತ ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ವೊಹ್ರಾ ಅವರು ನಿಧನರಾಗಿದ್ದಾರೆ.

ದೇಶಾದ್ಯಂತ ಮಾರಕ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಇದೀಗ ವೈರಸ್ ಸೋಂಕಿಗೆ ಮಹಾವೀರ ಚಕ್ರ ಪ್ರಶಸ್ತಿ ವಿಜೇತ ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ವೊಹ್ರಾ ಅವರು ಬಲಿಯಾಗಿದ್ದಾರೆ. ಈ ಬಗ್ಗೆ ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದು, ಜೂನ್ 14ರಂದು ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ವೊಹ್ರಾ ಅವರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. 

ಮೂಲಗಳ ಪ್ರಕಾರ ತನ್ನ ಹೃದಯನಾಳಕ್ಕೆ ಸ್ಚಂಟ್ ಅಳವಡಿಸಿಕೊಳ್ಳುವ ಸಲುವಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರನ್ನು ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಅವರ ವರದಿ ಪಾಸಿಟಿನ್ ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜೂನ್ 14ರಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. 

ಮಹಾವೀರ ಚಿಕ್ರ ದೇಶದ 2ನೇ ಅತ್ಯುನ್ನತ ಸೈನಿಕ ಪ್ರಶಸ್ತಿಯಾಗಿದ್ದು, ಯುದ್ಧ ಭೂಮಿಯಲ್ಲಿ ಅಪ್ರತಿಮ ಶೌರ್ಯ ಮೆರೆದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. 1972ರಲ್ಲಿ ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ವೊಹ್ರಾ ಅವರಿಗೆ ಈ ಪ್ರಶಸ್ತಿ ನೀಡಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com