ಕಾಶ್ಮೀರದ ರಜೌರಿಯಲ್ಲಿ ಪಾಕ್ ಪಡೆಗಳಿಂದ ಕದನ ವಿರಾಮ ಉಲ್ಲಂಘನೆ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡು ಹಾರಿಸುವ ಮೂಲಕ ಪಾಕಿಸ್ತಾನ ಪಡೆಗಳು ಸೋಮವಾರ ಕದನ ವಿರಾಮವನ್ನು ಉಲ್ಲಂಘಿಸಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡು ಹಾರಿಸುವ ಮೂಲಕ ಪಾಕಿಸ್ತಾನ ಪಡೆಗಳು ಸೋಮವಾರ ಕದನ ವಿರಾಮವನ್ನು ಉಲ್ಲಂಘಿಸಿವೆ.

ರಜೌರಿಯ ನೌಶೇರಾ ಸೆಕ್ಟರ್‌ನಲ್ಲಿ ಗಡಿನಿಯಂತ್ರಣ ರೇಖೆಯುದ್ದಕ್ಕೂ ಸಣ್ಣ ಶಸ್ತ್ರಾಸ್ತ್ರಗಳ ಮೂಲಕ ಅಪ್ರಚೋದಿತ ಗುಂಡಿನ ದಾಳಿ ಮತ್ತು ಮೊರ್ಟಾರ್‌ಗಳೊಂದಿಗೆ ಶೆಲ್ ದಾಳಿ ನಡೆಸುವ ಮೂಲಕ ಪಾಕಿಸ್ತಾನ ಪಡೆಗಳು ಸಂಜೆ 7 ಗಂಟೆ ಸುಮಾರಿಗೆ ಕದನ ವಿರಾಮವನ್ನು ಉಲ್ಲಂಘಿಸಿವೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಗುಂಡಿನ ದಾಳಿ ರಾತ್ರಿ 8.15ಕ್ಕೆ ನಿಂತಿದೆ. ರಜೌರಿಯ ಸುಂದರ್‌ಬಾನಿ ವಲಯದಲ್ಲಿ ಪಾಕಿಸ್ತಾನ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗೆ ಚಾಲನೆ ನೀಡಿದೆ. ಭಾರತೀಯ ಸೇನೆ ಸಹ ತಕ್ಕ ಪ್ರತ್ಯುತ್ತರ ನೀಡುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಜೂನ್ 14ರಂದು ಪೂಂಚ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿ, ಪಾಕ್ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com