ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್: 3 ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಎನ್ ಕೌಂಟರ್ ಮುಂದುವರಿದಿದ್ದು ಮಂಗಳವಾರ ಬೆಳ್ಳಂಬೆಳಗ್ಗೆ ಮೂವರು ಉಗ್ರರು ಹತರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಎನ್ ಕೌಂಟರ್ ಮುಂದುವರಿದಿದ್ದು ಮಂಗಳವಾರ ಬೆಳ್ಳಂಬೆಳಗ್ಗೆ ಮೂವರು ಉಗ್ರರು ಹತರಾಗಿದ್ದಾರೆ.

ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಟುರ್ಕ್ ವಂಗಮ್ ಪ್ರದೇಶದಲ್ಲಿ ಇಂದು ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ಅಪರಿಚಿತ ಉಗ್ರರನ್ನು ಹತ್ಯೆಗೈಯುವಲ್ಲಿ ಭಾರತೀಯ ಸೇನೆ ಯೋಧರು ಯಶಸ್ವಿಯಾಗಿದ್ದಾರೆ. ಸದ್ಯ ಅಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

44 ರಾಷ್ಟ್ರೀಯ ರೈಫಲ್ಸ್ ಮತ್ತು ಉಗ್ರಗಾಮಿಗಳ ಮಧ್ಯೆ ಇಂದು ನಸುಕಿನ ಜಾವ 5 ಗಂಟೆ ಸುಮಾರಿಗೆ ಶ್ರೀನಗರದಿಂದ 60 ಕಿಲೋ ಮೀಟರ್ ದೂರದಲ್ಲಿರುವ ಶೋಪಿಯಾನ್ ಜಿಲ್ಲೆಯ ಟುರ್ಕ್ ವಂಗಮ್ ಪ್ರದೇಶದಲ್ಲಿ ಎನ್ ಕೌಂಟರ್ ಆರಂಭವಾಯಿತು. ವಿಶೇಷ ಕಾರ್ಯಾಚರಣೆ ಗುಂಪಿನ ಪಡೆ, ಸಿಆರ್ ಪಿಎಫ್ ಯೋಧರು ನಂತರ ಕಾರ್ಯಾಚರಣೆ ಗುಂಪಿಗೆ ಸೇರಿ ಜಂಟಿ ಕಾರ್ಯಾಚರಣೆ ಬೆಳಗ್ಗೆ 6.30ರ ವೇಳೆಗೆ ಕೊನೆಯಾಯಿತು.

ಎನ್ ಕೌಂಟರ್ ನಡೆದ ಸ್ಥಳದಿಂದ ಒಂದು ಐಎನ್ಎಸ್ಎಎಸ್ ಮತ್ತು ಎರಡು ಎಕೆ-47 ರೈಫಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಶನಿವಾರ ಕುಲ್ಗಾಮ್ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com