56 ಇಂಚಿನ ಎದೆ ಎಲ್ಲಿ?: ಮೋದಿಗೆ ಕಾಂಗ್ರೆಸ್ ಪ್ರಶ್ನೆ

ಚೀನಾ-ಭಾರತ ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ಘಟನೆ ವರದಿಯಾಗುತ್ತಿದ್ದಂತೆಯೇ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಟೀಕಿಸಿದೆ. 
ಪಿಎಂ ನರೇಂದ್ರ ಮೋದಿ
ಪಿಎಂ ನರೇಂದ್ರ ಮೋದಿ

ನವದೆಹಲಿ: ಚೀನಾ-ಭಾರತ ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ಘಟನೆ ವರದಿಯಾಗುತ್ತಿದ್ದಂತೆಯೇ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಟೀಕಿಸಿದೆ. 

ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದು, ಲಡಾನ್ ನಲ್ಲಿ ಚೀನಾ ವಿರುದ್ಧ ಕ್ರಮ ಕೈಗೊಳ್ಳಲು ಹಿಂಜರಿಯುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. 

ದ್ವಿಮುಖ ರಾಜಕೀನಿ, ಯುಪಿಎ ಸರ್ಕಾರ ಎಲ್ಎಸಿಯಲ್ಲಿ ಚೀನಾ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದದ್ದನ್ನು ಮೋದಿ ಜೀ ಟೀಕಿಸುತ್ತಿದ್ದರು. ಈಗ ಅವರೇಕೆ ಕ್ರಮಕ್ಕೆ ಮುಂದಾಗುತ್ತಿಲ್ಲ? ಇತ್ತ ನೇಪಾಳವೂ ಸಹ ಭಾರತದ ವಿರುದ್ಧ ತಿರುಗಿಬಿದ್ದಿದೆ. ಆದರೂ ಏಕೆ ಮಾತುಕತೆ ಪ್ರಸ್ತಾವನೆ? 56 ಇಂಚಿನ ಎದೆ ಎಲ್ಲಿ? ಎಂದು ಸಿಬಲ್ ಪ್ರಶ್ನಿಸಿದ್ದಾರೆ. 

ಲಡಾಕ್ ನಲ್ಲಿ ಚೀನಾ ಆಕ್ರಮಣಕಾರಿ ನಡೆಯ ಕುರಿತು ಕೆಲವು ದಿನಗಳ ಹಿಂದೆ ರಾಹುಲ್ ಗಾಂಧಿ ಸಹ ಸರ್ಕಾರವನ್ನು ಪ್ರಶ್ನಿಸಿ ಪ್ರಧಾನಿಯನ್ನು ಗುರಿಯಾಗಿರಿಸಿಕೊಂಡು ವಾಗ್ದಾಳಿ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com