ಕೊರೋನಾ ವೈರಸ್ ನಿಗ್ರಹಕ್ಕೆ ಪಂಜಾಬ್ ಮಾದರಿ ಅನುಸರಿಸಿ: ಪ್ರಧಾನಿ ಮೋದಿ

ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಯಾರೂ ಕೂಡ ಮಾಸ್ಕ್ ಧರಿಸದೇ ಹೊರಗೆ ಬರಬಾರದು, ಪಂಜಾಬ್ ರಾಜ್ಯದ ಮಾದರಿಯನ್ನು ಅನುಸರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.
ಪಿಎಂ ನರೇಂದ್ರ ಮೋದಿ
ಪಿಎಂ ನರೇಂದ್ರ ಮೋದಿ

ನವದೆಹಲಿ: ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಯಾರೂ ಕೂಡ ಮಾಸ್ಕ್ ಧರಿಸದೇ ಹೊರಗೆ ಬರಬಾರದು, ಪಂಜಾಬ್ ರಾಜ್ಯದ ಮಾದರಿಯನ್ನು ಅನುಸರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಇಂದು ಹಲವು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದು, ಕೊರೋನಾ ನಿಯಂತ್ರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇತರೆ ರಾಜ್ಯಗಳು ಪಂಜಾಬ್ ಮಾದರಿಯನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ.

“ಕೊರೋನಾ ಸೋಂಕು ಹೆಚ್ಚಾಗದಂತೆ ನೋಡಿಕೊಳ್ಳಲು ಇರುವ ಏಕೈಕ ಮಾರ್ಗ ಪ್ರತಿಯೊಬ್ಬರು ಎಚ್ಚರಿಕೆಯಿಂದ ಇರುವುದು. ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳು ಪಂಜಾಬ್ ರಾಜ್ಯದ ನೀತಿಯನ್ನು ಮಾದರಿಯಾಗಿ ತೆಗೆದುಕೊಳ್ಳಬೇಕು. ಈ ರಾಜ್ಯದಲ್ಲಿ ಪ್ರತಿಯೊಬ್ಬರು ಮನೆಯಿಂದ ಹೊರ ಬರುವ ಮುನ್ನ ಕಡ್ಡಾಯವಾಗಿ ಮಾಸ್ಕ್ ಧರಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ ಎಂದರು.

'ಕೊರೋನಾ ಪಿಡುಗಿನ ವಿರುದ್ಧ ನಾವು ಒಂದು ದೇಶವಾಗಿ ಹೇಗೆ ಹೋರಾಡಿದೆವು ಎನ್ನುವುದನ್ನು ಮುಂದಿನ ತಲೆಮಾರು ನೆನಪಿಟ್ಟುಕೊಳ್ಳಲಿದೆ.  'ನಮ್ಮ ಕಾರ್ಯವೈಖರಿಯು ಸಹಕಾರದ ಒಕ್ಕೂಟ ವ್ಯವಸ್ಥೆಗೆ ಒಂದು ಮಾದರಿಯಾಗಿ ಉಳಿಯಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com