ಕೊರೋನಾ ವಾರಿಯರ್ಸ್'ಗೆ ವೇತನ, ಕ್ವಾರಂಟೈನ್ ವ್ಯವಸ್ಥೆಗಳನ್ನು ಸೂಕ್ತ ರೀತಿಯಲ್ಲಿ ಒದಗಿಸಿ: ಕೇಂದ್ರಕ್ಕೆ 'ಸುಪ್ರೀಂ' ಸೂಚನೆ

ಮಹಾಮಾರಿ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಕೊರೋನಾ ವಾರಿಯರ್ಸ್'ಗಳಿಗೆ ಸರಿಯಾದ ವೇತನ ಹಾಗೂ ಕ್ವಾರಂಟೈನ್ ವ್ಯವಸ್ಥೆಗಳನ್ನು ಸೂಕ್ತ ರೀತಿಯಲ್ಲಿ ಒದಗಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ಸೂಚನೆ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಹಾಮಾರಿ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಕೊರೋನಾ ವಾರಿಯರ್ಸ್'ಗಳಿಗೆ ಸರಿಯಾದ ವೇತನ ಹಾಗೂ ಕ್ವಾರಂಟೈನ್ ವ್ಯವಸ್ಥೆಗಳನ್ನು ಸೂಕ್ತ ರೀತಿಯಲ್ಲಿ ಒದಗಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ಸೂಚನೆ ನೀಡಿದೆ. 

ವೈದ್ಯರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯವಲ್ಲ ಎಂಬ ಕೇಂದ್ರ ಸರ್ಕಾರದ ಮೇ.15ರ ನಿರ್ಧಾರ ಕುರಿತು ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್ ಭೂಷಣ್, ಎಸ್.ಕೆ.ಕೌಲ್ ಹಾಗೂ ಎಂಆರ್.ಶಾಹ್ ಅವರಿದ್ದ ಪೀಠ ಇಂದು ವಿಚಾರಣೆ ನಡೆಸಿದೆ. 

ವಿಚಾರಣೆ ವೇಳೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳಿಗೆ ಕ್ವಾರಂಟೈನ್ ಸೌಲಭ್ಯಗಳನ್ನು ನಿರಾಕರಿಸಬಾರದು. ಈ ಕುರಿತು ರಾಜ್ಯ ಸರ್ಕಾರಗಳಿಗೆ ಸೂಕ್ತ ರೀತಿಯ ನಿರ್ದೇಶನ ನೀಡಿ ಎಂದು ತಿಳಿಸಿದೆ. 

ಅಲ್ಲದೆ, ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳಿಗೆ ನೀಡಲಾಗುವ ವೇತನ ಮತ್ತು ಕ್ವಾರಂಟೈನ್ ಸೌಲಭ್ಯಗಳ ಕುರಿತು ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದು, ಒಂದೇ ವೇಳೆ ಆದೇಶ ಪಾಲನೆ ಮಾಡದಿದ್ದರೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com