ಲಡಾಖ್ ಗಡಿ ಸಂಘರ್ಷ: ಜೂನ್ 19 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಿ ಮೋದಿ

ಚೀನಾ-ಭಾರತ ಗಡಿಯ ಗಲ್ವಾನ್ ನಲ್ಲಿ ಉಭಯ ದೇಶಗಳ ಯೋಧರ ನಡುವೆ ಸಂಘರ್ಷ ಏರ್ಪಟ್ಟ ಹಿನ್ನೆಲೆಯಲ್ಲಿ ಉಭಯ ದೇಶಗಳ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜೂನ್ 19 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಚೀನಾ-ಭಾರತ ಗಡಿಯ ಗಲ್ವಾನ್ ನಲ್ಲಿ ಉಭಯ ದೇಶಗಳ ಯೋಧರ ನಡುವೆ ಸಂಘರ್ಷ ಏರ್ಪಟ್ಟ ಹಿನ್ನೆಲೆಯಲ್ಲಿ ಉಭಯ ದೇಶಗಳ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜೂನ್ 19 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಈ ಕುರಿತು ಪ್ರಧಾನಮಂತ್ರಿಗಳ ಕಚೇರಿ ಮಾಹಿತಿ ನೀಡಿದ್ದು, ಭಾರತ-ಚೀನಾ ಗಡಿಯಲ್ಲಿ ಪರಿಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ವಿಚಾರ ಸಂಬಂಧ ಚರ್ಚೆ ನಡೆಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜೂ.19ರ ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳ ಅಧ್ಯಕ್ಷರು ವರ್ಚುವಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದೆ. 

ಪೂರ್ವ ಲಡಾಖ್'ನ ಗಲ್ವಾನ್ ಗಡಿಯಲ್ಲಿ ಕಳೆದ 5 ವಾರಗಳಿಂದ ಬಿಕ್ಕಟ್ಟು ಏರ್ಪಟ್ಟಿದೆ. ಈ ಕುರಿತು ಎರಡೂ ದೇಶಗಳ ನಡುವೆ ಮಾತುಕತೆ ನಡೆದಿದ್ದು, ಸ್ಥಳದಿಂದ ಹಿಂದೆ ಸರಿಯುವ ಕುರಿತು ಒಮ್ಮತಕ್ಕೆ ಬರಲಾಗಿತ್ತು. ಅದರಂತೆ ಚೀನಾ ಯೋಧರು ಸೋಮವಾರ ರಾತ್ರಿ ಕಾಲ್ತೆಗೆಯಲು ಆರಂಭಿಸಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಭಾರತೀಯ ಯೋಧರ ಮೇಲೆ ದೊಣ್ಣೆ ಹಾಗೂ ಕಲ್ಲುಗಳಿಂದ ದಾಳಿ ನಡೆಸಿದ್ದರು. ಕೂಡಲೇ ಭಾರತೀಯ ಯೋಧರು ಪ್ರತಿದಾಳಿಗೆ ಇಳಿದರು. ಹಲವು ತಾಸುಗಳ ಕಾಲ ಯೋಧರ ನಡುವೆ ಘರ್ಷಣೆ ನಡೆಯಿತು. ಮಧ್ಯರಾತ್ರಿ ಬಳಿಕ ಕಲಹ ನಿಂತಿತ್ತು. ಈ ಘರ್ಷಣೆಯಲ್ಲಿ ಭಾರತದ ಕರ್ನಲ್ ಸೇರಿ 20 ಮಂದಿ ಸಾವನ್ನಪ್ಪಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com