ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

ರಾಜ್ಯದಲ್ಲಿ ಜೂ 25ರಿಂದ ನಿಗದಿಯಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ/ಬೆಂಗಳೂರು: ರಾಜ್ಯದಲ್ಲಿ ಜೂ 25ರಿಂದ ನಿಗದಿಯಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಇದರಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಎದುರಾಗಿದ್ದ ಕಾನೂನು ತೊಡಕು ನಿವಾರಣೆಯಾಗಿದೆ.

ಪರೀಕ್ಷೆ ರದ್ದುಪಡಿಸುವಂತೆ ಕೋರಿ ಬೆಳಗಾವಿಯ ರಾಜಶ್ರೀ ಎಂಬುವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್, ಕೃಷ್ಣ ಮುರಾರಿ ಹಾಗೂ ಎಸ್.ರವೀಂದ್ರ ಭಟ್ ಅವರಿದ್ದ ತ್ರಿಸದಸ್ಯ ಸುಪ್ರೀಂ ಕೋರ್ಟ್ ವಜಾ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com