ಗರೀಬ್ ಕಲ್ಯಾಣ್: 50 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಯಡಿ ವಲಸೆ ಕಾರ್ಮಿಕರಿಗೆ ಉದ್ಯೋಗ

50 ಸಾವಿರ ಕೋಟಿ ರೂ ಮೌಲ್ಯದ ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ವಲಸೆ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Published: 18th June 2020 04:42 PM  |   Last Updated: 18th June 2020 04:45 PM   |  A+A-


FM Nimala Sitharaman

ನಿರ್ಮಲಾ ಸೀತಾರಾಮನ್

Posted By : Srinivasamurthy VN
Source : The New Indian Express

ನವದೆಹಲಿ: 50 ಸಾವಿರ ಕೋಟಿ ರೂ ಮೌಲ್ಯದ ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ವಲಸೆ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದೇ ಜೂನ್ 20ರಂದು ಪ್ರಧಾನಿ ನರೇಂದ್ರ ಮೋದಿ ಅವರು, ಗರೀಬ್ ಕಲ್ಯಾಣ್ ಯೋಜನೆಗೆ ಚಾಲನೆ ನೀಡಲಿದ್ದು, ಇದೇ ವಿಚಾರವಾಗಿ ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಗರೀಬ್ ಕಲ್ಯಾಣ ರೋಜ್ ಗಾರ್ ಅಭಿಯಾನದಡಿಯಲ್ಲಿ ಕೇಂದ್ರ ಸರ್ಕಾರ ಸುಮಾರು 50 ಸಾವಿರ ಕೋಟಿ ಮೌಲ್ಯದ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಇದರಲ್ಲಿ ದೇಶದ ಸಾವಿರಾರು ವಲಸೆ ಕಾರ್ಮಿಕರಿಗೆ ಉದ್ಯೋಗ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಈ ಹಿಂದೆ ಕೊರೋನಾ ವೈರಸ್ ಲಾಕ್ಡೌನ್ ನಿಂದಾಗಿ ಕೆಲಸ ಬಿಟ್ಟು ತವರು ಸೇರಿದ್ದ ಸುಮಾರು 25 ಸಾವಿರ ವಲಸೆ ಕಾರ್ಮಿಕರನ್ನು ಯೋಜನೆ ನಿಮಿತ್ತ ಆಯ್ಕೆ ಮಾಡಲಾಗಿದೆ. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್ ಮತ್ತು ಒಡಿಶಾದ 116 ಜಿಲ್ಲೆಗಳ 25 ಸಾವಿರ ವಲಸೆ ಕಾರ್ಮಿಕರು ಕೇಂದ್ರ ಸರ್ಕಾರದ ಈ ಅಭಿಯಾನದ ಭಾಗವಾಗಿರಲಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಈ ಯೋಜನೆಯಡಿಯಲ್ಲಿ 25 ಸಾವಿರ ವಲಸೆ ಕಾರ್ಮಿಕರು ಆರು ವಿವಿಧ ಕಾಮಗಾರಿ ಯೋಜನೆಗಳಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ವಾರ್ಷಿಕ 125 ದಿನಗಳ ಕಾಲ ಅವರಿಗೆ ಉದ್ಯೋಗ ದೊರೆಯಲಿದೆ ಎಂದು ಹೇಳಲಾಗಿದೆ. 

Stay up to date on all the latest ರಾಷ್ಟ್ರೀಯ news
Poll
Marraige

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 18 ರಿಂದ ಹೆಚ್ಚಿಸಬೇಕೆ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp