ನಾಳೆಯಿಂದ ಚೆನ್ನೈನಲ್ಲಿ ಮತ್ತೆ ಲಾಕ್ ಡೌನ್: ಮಾಂಸ, ಮೀನು ಮಾರಾಟ ನಿಷೇಧ

ತಮಿಳುನಾಡಿನಲ್ಲಿ ಅದರಲ್ಲೂ ಚೆನ್ನೈನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ರಾಜಧಾನಿಯಲ್ಲಿ ಶುಕ್ರವಾರದಿಂದ ಮತ್ತೆ ಲಾಕ್ ಡೌನ್ ಘೋಷಿಸಿದ್ದು, ಮಾಂಸ ಮತ್ತು ಮೀನು ಮಾರಾಟಕ್ಕೆ ಸಂಪೂರ್ಣ ನಿಷೇಧಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚೆನ್ನೈ: ತಮಿಳುನಾಡಿನಲ್ಲಿ ಅದರಲ್ಲೂ ಚೆನ್ನೈನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ರಾಜಧಾನಿಯಲ್ಲಿ ಶುಕ್ರವಾರದಿಂದ ಮತ್ತೆ ಲಾಕ್ ಡೌನ್ ಘೋಷಿಸಿದ್ದು, ಮಾಂಸ ಮತ್ತು ಮೀನು ಮಾರಾಟಕ್ಕೆ ಸಂಪೂರ್ಣ ನಿಷೇಧಿಸಿದೆ.

ಜೂನ್ 19ರಿಂದ ಜೂನ್ 30ರ ವರೆಗೆ ಚೆನ್ನೈನಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮತ್ತು ಮೀನು ಮಾರಾಟ ನಿರ್ಬಂಧಿಸಲಾಗಿದೆ ಎಂದು ಗ್ರೇಟರ್ ಚೆನ್ನೈ ಮಹಾನಗರ ಪಾಲಿಕೆ ಇಂದು ಸಂಜೆ ಪ್ರಕಟಣೆಯಲ್ಲಿ ತಿಳಿಸಿದೆ.

ಪೆರಂಬೂರ್, ವಿಲ್ಲಿವಾಕಂ, ಕಲ್ಲಿಕುಪ್ಪಂ ಮತ್ತು ಸೈದಾಪೆಟ್ಟೆಯಲ್ಲಿನ ಕಸಾಯಿಖಾನೆಗಳು ಈ ಲಾಕ್ ಡೌನ್ ಅವಧಿಯಲ್ಲಿ ಬಂದ್ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಮುಂಚೆ ಲಾಕ್ ಡೌನ್ ಸಡಿಲಗೊಳಿಸಿದಾಗ ಮಾಂಸದಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ವಿಫಲವಾಗಿತ್ತು. ಹೀಗಾಗಿ ಈ ಬಾರಿ ಮಾಂಸ ಮಾರಾಟಕ್ಕೆ ಅನುಮತಿ ನೀಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com