ಲಡಾಖ್ ಘರ್ಷಣೆಯಲ್ಲಿ 76 ಸೈನಿಕರಿಗೆ ಗಾಯ, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ: ಭಾರತೀಯ ಸೇನೆ

ಕಳೆದ ಸೋಮವಾರ ರಾತ್ರಿ ಲಡಾಖ್ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ನಡುವಿನ ಮಲ್ಲಯುದ್ಧದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೆ ಈ ಹಿಂಸಾತ್ಮಕ ಘರ್ಷಣೆಯಲ್ಲಿ 76 ಸೈನಿಕರು ಗಾಯಗೊಂಡಿದ್ದಾರೆ ಎಂದು ಗುರುವಾರ ಭಾರತೀಯ ಸೇನಾ ಮೂಲಗಳು ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಡಾಖ್: ಕಳೆದ ಸೋಮವಾರ ರಾತ್ರಿ ಲಡಾಖ್ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ನಡುವಿನ ಮಲ್ಲಯುದ್ಧದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೆ ಈ ಹಿಂಸಾತ್ಮಕ ಘರ್ಷಣೆಯಲ್ಲಿ 76 ಸೈನಿಕರು ಗಾಯಗೊಂಡಿದ್ದಾರೆ ಎಂದು ಗುರುವಾರ ಭಾರತೀಯ ಸೇನಾ ಮೂಲಗಳು ತಿಳಿಸಿದೆ.

ಲಡಾಖ್ ಘರ್ಷಣೆಯಲ್ಲಿ ಗಾಯಗೊಂಡ 76 ಸೈನಿಕರ ಪೈಕಿ 18 ಸೈನಿಕರು ಲೆಹ್ ನ ಭಾರತೀಯ ಸೇನೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾರ ಸ್ಥಿತಿಯೂ ಗಂಭೀರವಾಗಿಲ್ಲ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದು, ಮುಂದಿನ 15 ದಿನದಲ್ಲಿ ಮತ್ತೆ ಕರ್ತವ್ಯಕ್ಕೆ ಮರಳಲಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.

ಸಣ್ಣಪುಟ್ಟ ಗಾಯಳಾಗಿರುವ 58 ಸೈನಿಕರು ಇತರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಸಹ ಒಂದು ವಾರದಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಇದೇ ವೇಳೆ ನಮ್ಮ ಯಾವುದೇ ಸೈನಿಕರು ಕಣ್ಮರೆಯಾಗಿಲ್ಲ ಎಂದು ಭಾರತೀಯ ಸೇನೆ ಸ್ಫಷ್ಟಪಡಿಸಿದೆ.

ಲಡಾಖ್ ನ ಗಾಲ್ವಾನ್ ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರೆ, ಅತ್ತ ಚೀನಾದ 35ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com