ಚೀನಾ ಸೇನೆ ಒಳನುಸುಳುವಿಕೆ ಎಚ್ಚರಿಸುವಲ್ಲಿ ಗುಪ್ತಚರ ಇಲಾಖೆ ವಿಫಲ: ಸೋನಿಯಾ ಗಾಂಧಿ

ಗುಪ್ತಚರ ಇಲಾಖೆಯ ವೈಫಲ್ಯದ ಪರಿಣಾಮವಾಗಿ ಭಾರತದ ಭೂಪ್ರದೇಶಕ್ಕೆ ಚೀನಾ ಸೇನೆ ಒಳನುಸುಳಿದ್ದು, ಉಭಯ ರಾಷ್ಟ್ರಗಳ ನಡುವಿನ ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿದೆ ಎಂದು ಕಾಂಗ್ರೆಸ್‍ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ಗುಪ್ತಚರ ಇಲಾಖೆಯ ವೈಫಲ್ಯದ ಪರಿಣಾಮವಾಗಿ ಭಾರತದ ಭೂಪ್ರದೇಶಕ್ಕೆ ಚೀನಾ ಸೇನೆ ಒಳನುಸುಳಿದ್ದು, ಉಭಯ ರಾಷ್ಟ್ರಗಳ ನಡುವಿನ ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿದೆ ಎಂದು ಕಾಂಗ್ರೆಸ್‍ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಉಭಯ ದೇಶಗಳ ನಡುವಿನ ಗಡಿ ಬಿಕ್ಕಟ್ಟು ಕುರಿತು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ ಸೋನಿಯಾಗಾಂಧಿ, ಎನ್‌ಡಿಎ ಸರ್ಕಾರ ವಿಫಲವಾದ ಪರಿಣಾಮವಾಗಿ ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ದೂರಿದರು.

"ನನ್ನ ಪ್ರಕಾರ ಈ ಸಭೆ ಮೊದಲೇ ನಡೆಯಬೇಕಾಗಿತ್ತು. ಚೀನಾ ಮೇ 5 ರಂದೇ ಲಡಾಖ್‌ ಮತ್ತು ಇತರ ಪ್ರದೇಶಗಳಲ್ಲಿ ಒಳನುಗ್ಗಿದಾಗ ಸರಕಾರಕ್ಕೆ ಈ ಬಗ್ಗೆ ಮಾಹಿತಿ ನೀಡಲಾಗಿತ್ತು ಎಂಬ ವರದಿಗಳಿವೆ. ಇದಾದ ತಕ್ಷಣ ಈ ಸಭೆ ನಡೆದಿದ್ದರೆ ಚೆನ್ನಾಗಿತ್ತು," ಎಂದು ಸೋನಿಯಾ ಗಾಂಧಿ ಹೇಳಿದರು.

ಈ ಬಿಕ್ಕಟ್ಟಿಗೆ ಸಂಬಂಧಿಸಿದ ಹಲವು ಸೂಕ್ಷ್ಮ ವಿಚಾರಗಳಲ್ಲಿ ಈಗಲೂ ನಾವೆಲ್ಲರೂ ಕತ್ತಲಲ್ಲಿದ್ದೇವೆ ಎಂದು ಸೋನಿಯಾ ಗಾಂಧಿ ಪ್ರಧಾನಿ ಮೋದಿ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದರು.

ಭಾರತ-ಚೀನಾ ಗಡಿ ಘರ್ಷಣೆಯ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ವರ್ಚುಯಲ್ ಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ 20 ಪಕ್ಷಗಳ ನಾಯಕರು ಭಾಗವಹಿಸಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com