ಚೀನಾ ವಿರುದ್ಧ ಸೇಡು ತೀರಿಸಿಕೊಳ್ಳಲು ದೇಶವೇ ಬಯಸಿದೆ: ನಿತೀಶ್ ಕುಮಾರ್

ಲಡಾಕ್ ನಲ್ಲಿ ಚೀನಾದ ದುಷ್ಕೃತ್ಯಕ್ಕಾಗಿ ಇಡೀ ದೇಶವೇ ಚೀನಾ ವಿರುದ್ಧ ಸೇಡು ತೀರಿಸಿಕೊಳ್ಳಲು ಬಯಸಿದೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ
ನಿತೀಶ್ ಕುಮಾರ್
ನಿತೀಶ್ ಕುಮಾರ್

ಪಾಟ್ನಾ: ಲಡಾಕ್ ನಲ್ಲಿ ಚೀನಾದ ದುಷ್ಕೃತ್ಯಕ್ಕಾಗಿ ಇಡೀ ದೇಶವೇ ಚೀನಾ ವಿರುದ್ಧ ಸೇಡು ತೀರಿಸಿಕೊಳ್ಳಲು ಬಯಸಿದೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ

ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿಯವರು ಕರೆದಿರುವ ಸರ್ವಪಕ್ಷ ಸಭೆಯಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯ ಪರಿಸ್ಥಿತಿ ಕುರಿತು ಮಾತನಾಡಿದ್ದಾರೆ.

ಚೀನಾ ಯೋಧರಿಂದ ಹುತಾತ್ಮರಾದ 20 ಭಾರತೀಯ ಯೋಧರಿಗೆ ನಮನ ಸಲ್ಲಿಸಿ ಮಾತನಾಡಿದ ನಿತೀಶ್ ಕುಮಾರ್, ಹುತಾತ್ಮರಾದ ಐವರು ಯೋಧರು ಬಿಹಾರದವರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಎಲ್ಲಾ ಪಕ್ಷಗಳು ತಮ್ಮ ಭಿನ್ನಾಭಿಪ್ರಾಯ ಬದಿಗೊತ್ತಿ ಒಗ್ಗಟ್ಟಾಗಿ ಚೀನಾ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರ
ಜೊತೆ ಕೈಜೋಡಿಸಬೇಕು ಎಂದು ಹೇಳಿದ್ದಾರೆ. "ನಾವು 'ಹಿಂದಿ ಚೀನಿ ಭಾಯಿ ಭಾಯಿ' ಘೋಷಣೆಗಳನ್ನು ಕೇಳಿ ಬೆಳೆದಿದ್ದೇವೆ.

ನೆರೆಯವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಲು ಭಾರತದ ಪ್ರಯತ್ನಗಳ ಹೊರತಾಗಿಯೂ ಇಂತಹ ಸ್ಥಿತಿ ಎದುರಿಸುವಂತಾಗಿದೆ, ಹೀಗಾಗಿ ಇಡೀ ದೇಶವೇ ಚೀನಾ ವಿರುದ್ಧ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com