ಕೋವಿಡ್-19: ಇದೇ ಮೊದಲ ಬಾರಿಗೆ ಡಿಜಿಟಲ್ ಯೋಗ ದಿನಾಚರಣೆ 

ಕೊವಿಡ್-19 ಪರಿಣಾಮವಾಗಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಡಿಜಿಟಲ್ ಆಗಿರಲಿದೆ.  
ಕೋವಿಡ್-19: ಇದೇ ಮೊದಲ ಬಾರಿಗೆ ಡಿಜಿಟಲ್ ಯೋಗ ದಿನಾಚರಣೆ
ಕೋವಿಡ್-19: ಇದೇ ಮೊದಲ ಬಾರಿಗೆ ಡಿಜಿಟಲ್ ಯೋಗ ದಿನಾಚರಣೆ

ನವದೆಹಲಿ: ಕೊವಿಡ್-19 ಪರಿಣಾಮವಾಗಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಡಿಜಿಟಲ್ ಆಗಿರಲಿದೆ. 
 
ಡಿಜಿಟಲ್ ಮೀಡಿಯಾ ವೇದಿಕೆಗಳ ಮೂಲಕ ಯೋಗ ದಿನಾಚರಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶ ಕಾರ್ಯಕ್ರಮದ ಕೇಂದ್ರಬಿಂದುವಾಗಿರಲಿದೆ. 

'Yoga at Home and Yoga with Family' ಈ ವರ್ಷದ ಯೋಗ ದಿನಾಚರಣೆಯ ಥೀಮ್ ಆಗಿರಲಿದ್ದು, ಜೂ.21 ರಂದು 7 ಬೆಳಿಗ್ಗೆ ಯೋಗ ದಿನಾಚರಣೆಯ ಕಾರ್ಯಕ್ರಮ ಅಧಿಕೃತವಾಗಿ ಪ್ರಾರಂಭಗೊಳ್ಳಲಿದೆ. ವಿದೇಶಗಳಲ್ಲಿರುವ ಭಾರತೀಯ ದೂತವಾಸ ಕಚೇರಿಗಳು ಡಿಜಿಟಲ್ ಮಾಧ್ಯಮಗಳ ಮೂಲಕ ಯೋಗ ದಿನಾಚರಣೆಯನ್ನು ಉತ್ತೇಜಿಸುವ ಕೆಲಸ ಮಾಡುತ್ತಿವೆ.

ಕೋವಿಡ್-19 ಕ್ಕೂ ಮುನ್ನ ಆಯುಷ್ ಸಚಿವಾಲಯ ಯೋಗದಿನವನ್ನು ಲೇಹ್ ನಲ್ಲಿ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಿತ್ತು. ಆದರೆ ಕೊರೋನಾದ ಪರಿಣಾಮವಾಗಿ ರದ್ದುಗೊಳಿಸಲಾಯಿತು. 2014 ರ ಡಿಸೆಂಬರ್ 11 ರಂದು ವಿಶ್ವಸಂಸ್ಥೆ ಸಾಮಾನ್ಯ ಸಭೆ ಜೂ.21 ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಣೆ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಸ್ತಾವನೆಯನ್ನು ಅಂಗೀಕರಿಸಿ ಅಧಿಕೃತವಾಗಿ ಜೂ.21 ನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ಘೋಷಿಸಿತ್ತು. ಈ ಬಾರಿಯ ಯೋಗ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಬೆಳಿಗ್ಗೆ 6:30 ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com