ಮಧ್ಯ ಜುಲೈ ವೇಳೆಗೆ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾರಂಭ ಸಾಧ್ಯತೆ 

ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿರುವ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾರಂಭ ಮಧ್ಯ ಜುಲೈ ನಿಂದ ಪ್ರಾರಂಭವಾಗುವ ಸಾಧ್ಯತೆ ಇದೆ.
ಮಧ್ಯ ಜುಲೈ ವೇಳೆಗೆ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾರಂಭ ಸಾಧ್ಯತೆ
ಮಧ್ಯ ಜುಲೈ ವೇಳೆಗೆ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾರಂಭ ಸಾಧ್ಯತೆ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿರುವ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾರಂಭ ಮಧ್ಯ ಜುಲೈ ನಿಂದ ಪ್ರಾರಂಭವಾಗುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರ ಮಧ್ಯ ಜುಲೈ ನಿಂದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾರಂಭಕ್ಕೆ ಅನುಮತಿ ನೀಡುವ ಸಾಧ್ಯತೆ ಇದೆ.
ದೇಶಿಯ ವಿಮಾನಗಳಲ್ಲಿ ಪ್ರಯಾಣಿಕರ ಸಂಖ್ಯೆ ಶೇ.50 ರಷ್ಟು ದಾಟಿದ ನಂತರ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದ್ದು ಜುಲೈ 15 ರ ವೇಳೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಪ್ರಾರಂಭವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಕೋವಿಡ್-19 ಸಾಂಕ್ರಾಮಿಕ ರೋಗ ವ್ಯಾಪಿಸುವುದಕ್ಕೂ ಮುನ್ನ ದಿನವೊಂದಕ್ಕೆ 300,000 ಪ್ರಯಾಣಿಕರು ವಿಮಾನದಲ್ಲಿ ಸಂಚರಿಸುತ್ತಿದ್ದರು. ಮೇ.25 ರಿಂದ ದೇಶಿಯ ವಿಮಾನಗಳ ಕಾರ್ಯನಿರ್ವಹಣೆಗೆ ಮಾತ್ರ ಅನುಮತಿ ನೀಡಲಾಗಿದ್ದು, ಈಗ ದಿನವೊಂದಕ್ಕೆ 65,000-70,000 ಜನರು ವಿಮಾನದ ಮೂಲಕ ಸಂಚರಿಸುತ್ತಿದ್ದಾರೆ. ದೇಶಿಯವಾಗಿ 700 ವಿಮಾನಗಳು ಸಂಚರಿಸುತ್ತಿದೆ.

ಇನ್ನು ದೇಶಿಯ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸುವುದರ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಮುಂದಿನ ವಾರದಲ್ಲಿ ದೇಶಿಯ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ ಅಂತಾರಾಷ್ಟ್ರೀಯ ವಿಮಾನ ಸೌಲಭ್ಯದ ಬಗ್ಗೆಯೂ ಪುರಿ ಮಾತನಾಡಿದ್ದು, ಬೇರೆ ರಾಷ್ಟ್ರಗಳೂ ಸಹ ವಾಯುಗಡಿಯನ್ನು ಮುಕ್ತಗೊಳಿಸಿದರೆ ಅಂತಾರಾಷ್ಟ್ರೀಯ ವಿಮಾನ ಸೌಲಭ್ಯ ಸಾಧ್ಯವಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com