ಜೂ. 24ಕ್ಕೆ 12ನೇ ತರಗತಿ ಪರೀಕ್ಷೆ ರದ್ದು ಕುರಿತು ನಿರ್ಧಾರ ಸಾಧ್ಯತೆ: ಸುಪ್ರೀಂಗೆ ಕೇಂದ್ರ, ಸಿಬಿಎಸ್ಇ
12ನೇ ತರಗತಿಯ ಬಾಕಿ ಉಳಿದ ಪರೀಕ್ಷೆಗಳನ್ನು ರದ್ದುಪಡಿಸುವ ಕುರಿತು ಬುಧವಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಮತ್ತು ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ಇ) ಮಂಗಳವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿವೆ.
Published: 23rd June 2020 03:13 PM | Last Updated: 23rd June 2020 04:53 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: 12ನೇ ತರಗತಿಯ ಬಾಕಿ ಉಳಿದ ಪರೀಕ್ಷೆಗಳನ್ನು ರದ್ದುಪಡಿಸುವ ಕುರಿತು ಬುಧವಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಮತ್ತು ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ಇ) ಮಂಗಳವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿವೆ.
ಜುಲೈ 1ರಿಂದ 15ರ ತನಕ 12ನೇ ತರಗತಿಯ ಪರೀಕ್ಷೆಗಳನ್ನು ನಡೆಸಲು ಸಿಬಿಎಸ್‌ಇ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸುವಂತೆ ಕೋರಿ ಕೆಲ ಪೋಷಕರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆಂತರಿಕ ಮೌಲ್ಯಮಾಪನ ಮತ್ತು ಪ್ರಾಯೋಗಿಕ ಪರೀಕ್ಷೆಗಳ ಆಧಾರದಲ್ಲಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಬೇಕೆಂದೂ ಈ ಅರ್ಜಿದಾರರು ಮನವಿಯಲ್ಲಿ ಕೋರಿದ್ದಾರೆ.
ಅರ್ಜಿಯ ವಿಚಾರಣೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೊವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡುವ ಕುರಿತು ಈಗಲೇ ಹೇಳುವುದು ಕಷ್ಟ. ಈ ಕುರಿತು ಸರ್ಕಾರ ಶೀಘ್ರ ನಿರ್ಧಾರ ಪ್ರಕಟಿಸಲಿದೆ ಎಂದರು.
ವಿದ್ಯಾರ್ಥಿಗಳ ಆತಂಕದ ಬಗ್ಗೆ ಸರ್ಕಾರ ಮತ್ತು ಪರೀಕ್ಷಾ ಮಂಡಳಿಗೆ ತಿಳಿದಿದೆ. ವಿಚಾರಣೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಿ, ಈ ಸಂಬಂಧ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವನ್ನು ಕೋರ್ಟ್ ಗಮನಕ್ಕೆ ತರುವುದಾಗಿ ಮೆಹ್ತಾ ಹೇಳಿದರು.
ಮೆಹ್ತಾ ಅವರ ಮನವಿಯನ್ನು ಪರಿಗಣಿಸಿದ ಕೋರ್ಟ್, ವಿಚಾರಣೆಯನ್ನು ಜೂನ್ 25ಕ್ಕೆ ಮುಂದೂಡಿದೆ.