ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಆರೋಗ್ಯ ಸ್ಥಿರ, ಐಸಿಯುವಿನಿಂದ ಸ್ಥಳಾಂತರ: ಮೂಲಗಳು

ಕೊರೋನಾ ಸೋಂಕಿಗೊಳಗಾಗಿ ಪ್ಲಾಸ್ಮಾ ಚಿಕಿತ್ಸೆ ಪಡೆದುಕೊಂಡಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಆರೋಗ್ಯ ಸ್ಥಿರವಾಗಿದ್ದು, ಇದೀಗ ಐಸಿಯುವಿನಿಂದ ವಾರ್ಡ್'ಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 
ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್
ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್

ನವದೆಹಲಿ: ಕೊರೋನಾ ಸೋಂಕಿಗೊಳಗಾಗಿ ಪ್ಲಾಸ್ಮಾ ಚಿಕಿತ್ಸೆ ಪಡೆದುಕೊಂಡಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಆರೋಗ್ಯ ಸ್ಥಿರವಾಗಿದ್ದು, ಇದೀಗ ಐಸಿಯುವಿನಿಂದ ವಾರ್ಡ್'ಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಜೂನ್.17ರಂದು ಜೈನ್ ಅವರಲ್ಲಿ ಕೊರೋನಾ ಪತ್ತೆಯಾಗಿತ್ತು. ಇದೀಗ ಅವರ ಆರೋಗ್ಯ ಸುಧಾರಿಸಿದ್ದು, ಆಮ್ಲಜನಕ ಸ್ಯಾಚುರೇಶನ್ ಮಟ್ಟ ಸಹ ಸಾಕಷ್ಟು ಸುಧಾರಿಸಿದೆ ಎಂದು ಹೇಳಲಾಗುತ್ತಿದೆ. 

ಕಳೆದ ಶನಿವಾರವಷ್ಟೇ ಜೈನ್ ಅವರಿಗೆ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿತ್ತು. ಸರ್ಕಾರಿ ಆಸ್ಪತ್ರೆಯ ಕೆಲ ಹಿರಿಯ ವೈದ್ಯರು ಹಾಗೂ ಖಾಸಗಿ ಆಸ್ಪತ್ರೆಗಳು ಜೈನ್ ಆರೋಗ್ಯ ಪರಿಸ್ಥಿತಿ ಕುರಿತು ನಿರಂತರ ತಪಾಸಣೆ ನಡೆಸುತ್ತಲೇ ಇದೆ. 

ಜೂನ್.17 ರಂದು ಜೈನ್ ಅವರಲ್ಲಿ ವೈರಸ್ ಪತ್ತೆಯಾಗಿತ್ತು. ಬಳಿಕ ಅವರನ್ನು ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಜೈನ್ ಅವರಲ್ಲಿ ಅತೀವ್ರ ಜ್ವರ ಕಾಣಿಸಿಕೊಂಡಿದ್ದು, ಉಸಿರಾಟ ಸಮಸ್ಯೆ ಅತೀವ್ರಗೊಂಡಿತ್ತು. ರಾಜೀನ್ ಗಾಂಧಿ ಆಸ್ಪತ್ರೆಯಲ್ಲಿ ಕೊರೋನಾಗೆ ಚಿಕಿತ್ಸೆ ನೀಡಲು ಅನುಮತಿ ನೀಡಲಾಗಿದೆ. ಆದರೆ, ಪ್ಲಾಸ್ಮಾ ಥೆರಪಿಗೆ ಅನುಮತಿ ನೀಡಲಾಗಿಲ್ಲ. ಹೀಗಾಗಿ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಅವರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com