ಭಕ್ತಾಧಿಗಳಿಗೆ ಶಾಕಿಂಗ್ ನ್ಯೂಸ್: ಪುರಿ ಜಗನ್ನಾಥ ದೇವಾಲಯದ ಅರ್ಚಕರೊಬ್ಬರಿಗೆ ಕೋವಿಡ್-19 ಪಾಸಿಟಿವ್ 

ಒಡಿಶಾದ ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದ ಬೆನ್ನಲ್ಲೇ ಭಕ್ತಾಧಿಗಳಿಗೆ ಶಾಕಿಂಗ್ ನ್ಯೂಸ್ ವೊಂದು ಹೊರಬಿದ್ದಿದೆ. ದೇವಾಲಯದ ಅರ್ಚಕರೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಪುರಿ ಜಗನ್ನಾಥ ದೇವಾಲದ ಆರ್ಚಕರು
ಪುರಿ ಜಗನ್ನಾಥ ದೇವಾಲದ ಆರ್ಚಕರು

ಪುರಿ: ಒಡಿಶಾದ ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದ ಬೆನ್ನಲ್ಲೇ ಭಕ್ತಾಧಿಗಳಿಗೆ ಶಾಕಿಂಗ್ ನ್ಯೂಸ್ ವೊಂದು ಹೊರಬಿದ್ದಿದೆ. ದೇವಾಲಯದ ಅರ್ಚಕರೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ಪುರಿ ಜಗನ್ನಾಥ ದೇವಾಲಯದ ಎಲ್ಲಾ ಅರ್ಚಕರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ ಒಬ್ಬರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರಿಗೆ ರಥಯಾತ್ರೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿಲ್ಲ ಎಂದು ಒಡಿಶಾ ರಾಜ್ಯದ ಕಾನೂನು ಸಚಿವ ಪ್ರತಾಪ್ ಜೀನಾ ತಿಳಿಸಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕ ಹಿನ್ನಲೆಯಲ್ಲಿ ರಥಯಾತ್ರೆ ನಡೆಸಲು ಅನುಮತಿ ನೀಡಲು ಸುಪ್ರೀಂಕೋರ್ಟ್ ಈ ಮೊದಲು ನಿರಾಕರಿಸಿತ್ತು. ಲಾಕ್ ಡೌನ್ ನಿರ್ಬಂಧಗಳನ್ನು ಉಲ್ಲಂಘಿಸಿ ರಥಯಾತ್ರೆ ನಡೆಸಿದರೆ ಆ ದೇವರು ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಈ ಹಿಂದೆ ನ್ಯಾಯಪೀಠ ಅಭಿಪ್ರಾಯಪಟ್ಟಿತ್ತು.

ಆದಾಗ್ಯೂ, ನಿನ್ನೆ ಜೂನ್ 18  ರಂದು ನೀಡಿದ್ದ ತನ್ನ ತೀರ್ಪನ್ನು ಬದಲಾಯಿಸಿ ರಥಯಾತ್ರೆಗೆ ಷರತ್ತುಬದ್ಧ ಅವಕಾಶವನ್ನು  ಸುಪ್ರೀಂ ಕೋರ್ಟ್ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com