ಐಸಿಎಸ್ ಇ 10, 12ನೇ ತರಗತಿ ಪರೀಕ್ಷೆಗೆ ಅನುಮತಿ ಇಲ್ಲ: ಬಾಂಬೆ ಹೈಕೋರ್ಟ್ ಗೆ ಮಹಾ ಸರ್ಕಾರದ ಮಾಹಿತಿ
ಬಾಕಿ ಉಳಿದರುವ ಐಸಿಎಸ್ ಇ 10ನೇ ಮತ್ತು 12 ತರಗತಿಗಳ ಪರೀಕ್ಷೆಗೆ ರಾಜ್ಯದಲ್ಲಿ ಅನುಮತಿ ನೀಡುವುದಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ಬುಧವಾರ ಬಾಂಬೆ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
Published: 24th June 2020 03:49 PM | Last Updated: 24th June 2020 03:49 PM | A+A A-

ಸಾಂದರ್ಭಿಕ ಚಿತ್ರ
ಮುಂಬೈ: ಬಾಕಿ ಉಳಿದರುವ ಐಸಿಎಸ್ ಇ 10ನೇ ಮತ್ತು 12 ತರಗತಿಗಳ ಪರೀಕ್ಷೆಗೆ ರಾಜ್ಯದಲ್ಲಿ ಅನುಮತಿ ನೀಡುವುದಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ಬುಧವಾರ ಬಾಂಬೆ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಜುಲೈನಲ್ಲಿ ನಿಗದಿಯಾಗಿರುವ ಐಸಿಎಸ್ ಇಯ 10 ಮತ್ತು 12ನೇ ತರಗತಿ ಪರೀಕ್ಷೆಗಳಿಗೆ ಅನುಮತಿ ನೀಡುವುದಿಲ್ಲ ಎಂದು ಮಹಾ ಸರ್ಕಾರ ಕೊರ್ಟ್ ಗೆ ಸ್ಪಷ್ಟಪಡಿಸಿದೆ.
ಇದೇ ವೇಳೆ, ಕೊರೋನಾ ವೈರಸ್ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ಪರೀಕ್ಷೆಗಳನ್ನು ಸಹ ನಡೆಸದಿರಲು ಸರ್ಕಾರ ನಿರ್ಧರಿಸಿದೆ ಎಂದು ಕೋರ್ಟ್ ಗೆ ತಿಳಿಸಲಾಗಿದೆ.
ಮುಖ್ಯಮಂತ್ರಿ ಉದ್ಧವ್ ಠಾತ್ರೆ ನೇತೃತ್ವದಲ್ಲಿ ಮಂಗಳವಾರ ನಡೆದ ರಾಜ್ಯ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಐಸಿಎಸ್ ಇ ಪರೀಕ್ಷೆಗೆ ಅನುಮತಿ ನೀಡದಿರುವು ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಡ್ವೊಕೇಟ್ ಜನರಲ್ ಆಶುತೋಷ್ ಕುಂಭಕೋನಿ ಅವರು ಕೋರ್ಟ್ ಗೆ ತಿಳಿಸಿದ್ದಾರೆ.
ಐಸಿಎಸ್ಇ ಪರೀಕ್ಷೆ ನಡೆಸದಂತೆ ಕೋರಿ ಮುಂಬೈ ನಿವಾಸಿ ಅರವಿಂದ್ ತಿವಾರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮಹಾ ಸರ್ಕಾರ ಈ ಮಾಹಿತಿ ನೀಡಿದೆ.