ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು! 

ತೈಲ ಬೆಲೆ ಏರಿಕೆಯನ್ನು ಹಿಂಪಡೆಯಲು ಆಗ್ರಹಿಸಿ ಕಾಂಗ್ರೆಸ್ ದೇಶಾದ್ಯಂತ ಜನಾಂದೋಲನ ಪ್ರಾರಂಭಿಸಲು ತೀರ್ಮಾನಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ತೈಲ ಬೆಲೆ ಏರಿಕೆಯನ್ನು ಹಿಂಪಡೆಯಲು ಆಗ್ರಹಿಸಿ ಕಾಂಗ್ರೆಸ್ ದೇಶಾದ್ಯಂತ ಜನಾಂದೋಲನ ಪ್ರಾರಂಭಿಸಲು ತೀರ್ಮಾನಿಸಿದೆ. ತೈಲ ಬೆಲೆ ಏರಿಕೆಯ ವಿಷಯ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯನ್ನು ಖಂಡಿಸಿದ್ದು, ಸರ್ಕಾರಕ್ಕೆ ರಾಜಧರ್ಮ ಪಾಲನೆಯನ್ನು ನೆನಪಿಸಿದೆ.

ಅನ್ಯಾಯವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಕಳೆದ 3 ತಿಂಗಳಿನಿಂದ ಅಬಕಾರಿ ಸುಂಕವನ್ನು ಏರಿಕೆ ಮಾಡುತ್ತಿರುವುದರ ವಿರುದ್ಧ ಸಿಡಬ್ಲ್ಯು ಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ತೈಲ ಬೆಲೆ ಏರಿಕೆ ವಿರುದ್ಧ ಜನಾಂದೋಲನ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.

"ಈ ತಕ್ಷಣದಿಂದಲೇ ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆಯನ್ನು ಹಿಂಪಡೆಯಬೇಕು. ಜಾಗತಿಕ ಮಟ್ಟದಲ್ಲಿ ತೈಲ ಕಡಿಮೆ ಬೆಲೆಗೆ ದೊರೆಯುತ್ತಿರುವುದರ ಲಾಭವನ್ನು ಜನತೆಗೆ ತಲುಪಿಸಬೇಕು ಎಂದು ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com