ಅಧಿಕಾರಿಗಳಿಗೆ ಕೊರೋನಾ: ಒಡಿಶಾದ ಗಂಜಾಮ್ ಜಿಲೆಯಲ್ಲಿ 10 ದಿನ  ಸರ್ಕಾರಿ ಕಚೇರಿಗಳು ಬಂದ್

ಮಹಾಮಾರಿ ಕೊರೋನಾ ವೈರಸ್ ಒಡಿಶಾದ ಗಂಜಾಮ್ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಅದನ್ನು ನಿಯಂತ್ರಿಸುವುದಕ್ಕಾಗಿ ಜಿಲ್ಲೆಯಲ್ಲಿ ಮತ್ತೆ 10 ದಿನ ಎಲ್ಲಾ ಸರ್ಕಾರಿ ಕಚೇರಿಗಳು ಬಂದ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿಜಯ್ ಅಮೃತಾ ಕುಲಂಗೆ ಅವರು ಬುಧವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗಂಜಾಮ್: ಮಹಾಮಾರಿ ಕೊರೋನಾ ವೈರಸ್ ಒಡಿಶಾದ ಗಂಜಾಮ್ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಅದನ್ನು ನಿಯಂತ್ರಿಸುವುದಕ್ಕಾಗಿ ಜಿಲ್ಲೆಯಲ್ಲಿ ಮತ್ತೆ 10 ದಿನ ಎಲ್ಲಾ ಸರ್ಕಾರಿ ಕಚೇರಿಗಳು ಬಂದ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿಜಯ್ ಅಮೃತಾ ಕುಲಂಗೆ ಅವರು ಬುಧವಾರ ತಿಳಿಸಿದ್ದಾರೆ.

ಹಲವು ಹಿರಿಯ ಅಧಿಕಾರಿಗಳಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದರಿಂದ ಜಿಲ್ಲೆಯಲ್ಲಿ 10 ದಿನಗಳ ಕಾಲ ಎಲ್ಲಾ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಇಂದಿನಿಂದ 10 ದಿನಗಳ ಕಾಲ ಸಾರ್ವಜನಿಕರಿಗೆ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಲಾಗುತ್ತಿದೆ ಎಂದು ಕುಲಂಗೆ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನ 76 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯ ಸೋಂಕಿತರ ಸಂಖ್ಯೆ 1031ಕ್ಕೆ ಏರಿಕೆಯಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಕೊರೋನಾಗೆ 8 ಮಂದಿ ಬಲಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com