ತುರ್ತು ಪರಿಸ್ಥಿತಿ ಸಮಯದಲ್ಲಿ ಪ್ರಜಾಪ್ರಭುತ್ವಕ್ಕಾಗಿ ಹೋರಾಡಿದವರ ತ್ಯಾಗವನ್ನು ದೇಶ ಮರೆಯುವುದಿಲ್ಲ: ಪ್ರಧಾನಿ ಮೋದಿ

ರಾಷ್ಟ್ರೀಯ ತುರ್ತು ಪರಿಸ್ಥಿತಿ ಸಮಯದಲ್ಲಿ ಪ್ರಜಾಪ್ರಭುತ್ವಕ್ಕಾಗಿ ಹೋರಾಡಿದ್ದ  ಜನರ ತ್ಯಾಗವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಿಎಂ ಮೋದಿ
ಪಿಎಂ ಮೋದಿ

ನವದೆಹಲಿ: ರಾಷ್ಟ್ರೀಯ ತುರ್ತು ಪರಿಸ್ಥಿತಿ ಸಮಯದಲ್ಲಿ ಪ್ರಜಾಪ್ರಭುತ್ವಕ್ಕಾಗಿ ಹೋರಾಡಿದ್ದ  ಜನರ ತ್ಯಾಗವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ 1975 ರ ಜೂನ್ 25 ರಂದು ದೇಶದಲ್ಲಿ ತುರ್ತು ಪರಿಸ್ಥಿತಿ ವಿಧಿಸಿದ್ದರು.

"ನಿಖರವಾಗಿ 45 ವರ್ಷಗಳ ಹಿಂದೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಲಾಯಿತು. ಆಗ ಭಾರತದ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೋರಾಡಿದವರನ್ನು ಚಿತ್ರಹಿಂಸೆಗೆ ಗುರಿಮಾಡಲಾಗಿತ್ತು. ಅವರ ತ್ಯಾಗವನ್ನು ನಾವೆಂದಿಗೂ ಮರೆಯಲು ಸಾಧ್ಯವಿಲ್ಲ" ಪ್ರಧಾನಿ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದಲ್ಲದೆ ಪ್ರಧಾನಿಗಳು ತಮ್ಮ ರೇಡಿಯೋ ಕಾರ್ಯಕ್ರಮ "ಮನ್ ಕಿ ಬಾತ್" ಒಂದು ಕಿರು ತುಣುಕನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ತುರ್ತು ಪರಿಸ್ಥಿತಿಯನ್ನು ಉಲ್ಲೇಖಿಸಿದ್ದಾರೆ. ಅವರು ತಮ್ಮ "ಮನ್ ಕಿ ಬಾತ್"  ಕಾರ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯನ್ನು ಉಲ್ಲೇಖಿಸಿ ಜನರು  ಪ್ರಜಾಪ್ರಭುತ್ವವನ್ನು "ಲಘುವಾಗಿ" ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.ನಿತ್ಯ ಜೀವನದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ಅನುಭವಿಸುವ ಸಂತೋಷವೇ ಅತ್ಯಂತ ಮುಖ್ಯ. 1977 ರ ಲೋಕಸಭಾ ಚುನಾವಣೆಯಲ್ಲಿ ಜನರು ಇಪ್ರಜಾಪ್ರಭುತ್ವವನ್ನು ಉಳಿಸುವ ಉದ್ದೇಶದಿಂದ ಮತ ಚಲಾಯಿಸಿದ್ದಾರೆ. ಎಂದು ಪ್ರಧಾನಿ ಹೇಳಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com