ಕೊರೋನಾ ವೈರಸ್
ಕೊರೋನಾ ವೈರಸ್

ದೆಹಲಿ: ಒಂದೇ ದಿನ 3,788 ಹೊಸ ಸೋಂಕು ಪ್ರಕರಣ, 70 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆಟ್ಟಹಾಸ ಮುಗಿಲುಮುಟ್ಟಿದ್ದು, ದೆಹಲಿಯಲ್ಲಿ ಇದೀಗ ಕೊರೋನಾ ಸೋಂಕಿತರ ಸಂಖ್ಯೆ 70 ಸಾವಿರ ಗಡಿದಾಟಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆಟ್ಟಹಾಸ ಮುಗಿಲುಮುಟ್ಟಿದ್ದು, ದೆಹಲಿಯಲ್ಲಿ ಇದೀಗ ಕೊರೋನಾ ಸೋಂಕಿತರ ಸಂಖ್ಯೆ 70 ಸಾವಿರ ಗಡಿದಾಟಿದೆ.

ಹೌದು.. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 3,788 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜಧಾನಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 70,390ಕ್ಕೆ ಏರಿಕೆಯಾಗಿದೆ.

ದೆಹಲಿ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಅನ್ವಯ ದೆಹಲಿಯಲ್ಲಿ ಈ ವರೆಗೂ 41,437 ಮಂದಿ ಸೋಂಕಿತರು ಗುಣಮುಖರಾಗಿದ್ದು, 26,588 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿಯಲ್ಲಿ ಈ ವರೆಗೂ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 2,365ಕ್ಕೆ ಏರಿಕೆಯಾಗಿದೆ. 

ಕೊರೋನಾ ವೈರಸ್ ಸಾವು ಮತ್ತು ಸೋಂಕಿತರ ಸಂಖ್ಯೆ ಕಡಿಮೆ ಮಾಡಲು ದೆಹಲಿ ಸರ್ಕಾರ ಹರಸಾಹಸ ಪಡುತ್ತಿದ್ದರೂ ಈ ಸಂಖ್ಯೆಗಳು ಕಡಿಮೆಯಾಗುತ್ತಲೇ ಇಲ್ಲ.

Related Stories

No stories found.

Advertisement

X
Kannada Prabha
www.kannadaprabha.com