ಸಿಬಿಎಸ್ ಇ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶವಿದೆ: ಕೇಂದ್ರ ಮಾನವ ಸಂಪನ್ಮೂಲ ಸಚಿವ

ಜುಲೈ 15ರಂದು ಪ್ರಕಟವಾಗಲಿರುವ ಫಲಿತಾಂಶದ ಬಗ್ಗೆ ಅತೃಪ್ತಿ ಇದ್ದಂತಹ ಸಿಬಿಎಸ್ ಇ ಹತ್ತನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳುವ ಅವಕಾಶ ಇರಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಇಂದು ಹೇಳಿದ್ದಾರೆ.
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು

ನವದೆಹಲಿ: ಜುಲೈ 15ರಂದು ಪ್ರಕಟವಾಗಲಿರುವ ಫಲಿತಾಂಶದ ಬಗ್ಗೆ ಅತೃಪ್ತಿ ಇದ್ದಂತಹ ಸಿಬಿಎಸ್ ಇ ಹತ್ತನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳುವ ಅವಕಾಶ ಇರಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಇಂದು ಹೇಳಿದ್ದಾರೆ.

ಜುಲೈ1 ರಿಂದ ಜುಲೈ 15 ರಂದು ನಿಗದಿಯಾಗಿದ್ದ ಬಾಕಿ ಉಳಿದಿದ್ದ  10 ಮತ್ತು 12 ನೇ ತರಗತಿ ಸಿಬಿಎಸ್ ಇ ಪರೀಕ್ಷೆಯನ್ನು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದ್ದು, ಜುಲೈ 15 ರಂದು ಫಲಿತಾಂಶವನ್ನು ಪ್ರಕಟಿಸಲು ಸಿಬಿಎಸ್ ಇ ನಿರ್ಧರಿಸಿದೆ.

ಆದಾಗ್ಯೂ, ಈಗಾಗಲೇ ನೀಡಲಾಗಿರುವ ಪರೀಕ್ಷೆಗಳ ಆಧಾರದ ಮೇಲೆ ಫಲಿತಾಂಶವನ್ನು ಲೆಕ್ಕಹಾಕಲಾಗುತ್ತದೆ. ಆದರೆ, ಪರೀಕ್ಷೆಗಳನ್ನು ತೆಗೆದುಕೊಂಡಿದ್ದರೆ ಉತ್ತಮ ರೀತಿಯಲ್ಲಿ ಬರೆಯಬಹುದಿತ್ತು ಎಂದು ಭಾವಿಸುವ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಬಹುದು. ಎಲ್ಲಾ ವಿಷಯಗಳ ಪರೀಕ್ಷೆಗಳನ್ನು ತೆಗೆದುಕೊಳ್ಳದಿರುವ ವಿದ್ಯಾರ್ಥಿಗಳಿಗೂ ಈ ಆಯ್ಕೆ ಇರಲಿದೆ ಎಂದು ಪೋಖ್ರಿಯಾಲ್ ತಿಳಿಸಿದ್ದಾರೆ.

ಈ ಅವಕಾಶವನ್ನು ಒತ್ತಡ ಇಲ್ಲದೆ ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಪೋಖ್ರಿಯಾಲ್  ಹಾರೈಸಿದ್ದಾರೆ. ವಿದ್ಯಾರ್ಥಿಗಳ ಜೀವ ಮತ್ತು ಶಿಕ್ಷಣ ರಕ್ಷಣೆ ನಮ್ಮ ಮೊದಲ ಆದ್ಯತೆ, ವಿದ್ಯಾರ್ಥಿಗಳ ಭವಿಷ್ಯ ಸುಂದರವಾಗಿರಲಿ ಎಂದು ಹಾರೈಸುತ್ತೇನೆ.ಈ ಅವಕಾಶವನ್ನು ಒತ್ತಡವಿಲ್ಲದೆ, ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಂತೆ ಅವರು ಹೇಳಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಜುಲೈ 1ರಿಂದ ಜುಲೈ 15ರ ನಡುವೆ ನಿಗದಿಪಡಿಸಿದ್ದ ಹತ್ತು ಮತ್ತು 12 ನೇ ತರಗತಿಯ ಬಾಕಿ ವಿಷಯಗಳ ಸಿಬಿಎಸ್ ಇ ಪರೀಕ್ಷೆಗಳನ್ನು ರದ್ದುಪಡಿಸುವುದಾಗಿ ಸಿಬಿಎಸ್ ಇ ಮತ್ತು ಐಸಿಎಸ್ ಇ ಜೂನ್ 25 ರಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದವು. ಜುಲೈ 15 ರಂದು ಬೋರ್ಡ್ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸುವುದಾಗಿ ಸಿಬಿಎಸ್ ಇ ಮತ್ತು ಐಸಿಎಸ್ ಇ ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com