ದೆಹಲಿ: ಒಂದೇ ದಿನ 2,889 ಹೊಸ ಕೊರೋನಾ ಪ್ರಕರಣ, 83 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆಟ್ಟಹಾಸ ಮುಗಿಲುಮುಟ್ಟಿದ್ದು, ದೆಹಲಿಯಲ್ಲಿ ಇದೀಗ ಕೊರೋನಾ ಸೋಂಕಿತರ ಸಂಖ್ಯೆ 83 ಸಾವಿರ ಗಡಿದಾಟಿದೆ.
ಕೊರೋನಾ ವೈರಸ್
ಕೊರೋನಾ ವೈರಸ್

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆಟ್ಟಹಾಸ ಮುಗಿಲುಮುಟ್ಟಿದ್ದು, ದೆಹಲಿಯಲ್ಲಿ ಇದೀಗ ಕೊರೋನಾ ಸೋಂಕಿತರ ಸಂಖ್ಯೆ 83 ಸಾವಿರ ಗಡಿದಾಟಿದೆ.

ಹೌದು.. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 2889 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜಧಾನಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 83077ಕ್ಕೆ ಏರಿಕೆಯಾಗಿದೆ.

ದೆಹಲಿ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಅನ್ವಯ ದೆಹಲಿಯಲ್ಲಿ ಈ ವರೆಗೂ 52,607 ಮಂದಿ ಸೋಂಕಿತರು ಗುಣಮುಖರಾಗಿದ್ದು, 27847 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿಯಲ್ಲಿ ಈ ವರೆಗೂ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 2623ಕ್ಕೆ ಏರಿಕೆಯಾಗಿದೆ. 

ಕೊರೋನಾ ವೈರಸ್ ಸಾವು ಮತ್ತು ಸೋಂಕಿತರ ಸಂಖ್ಯೆ ಕಡಿಮೆ ಮಾಡಲು ದೆಹಲಿ ಸರ್ಕಾರ ಹರಸಾಹಸ ಪಡುತ್ತಿದ್ದರೂ ಈ ಸಂಖ್ಯೆಗಳು ಕಡಿಮೆಯಾಗುತ್ತಲೇ ಇಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com