ಮುಂಬೈನಲ್ಲಿ ಮತ್ತೆ 1,460 ಹೊಸ ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 80,188 ಕ್ಕೆ ಏರಿಕೆ
ದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿ ಗಳಿಸಿರುವ ಮುಂಬೈ ಮಹಾನಗರಿಯಲ್ಲಿ ನಿನ್ನೆ 1,460 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 80,188 ಕ್ಕೆ ಏರಿಕೆಯಾಗಿದೆ.
Published: 29th June 2020 09:24 AM | Last Updated: 29th June 2020 12:31 PM | A+A A-

ಅಂಗಡಿಗೆ ಸೋಂಕು ನಿವಾರಕ
ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿ ಗಳಿಸಿರುವ ಮುಂಬೈ ಮಹಾನಗರಿಯಲ್ಲಿ ನಿನ್ನೆ 1,460 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 80,188 ಕ್ಕೆ ಏರಿಕೆಯಾಗಿದೆ.
ಬೃಹನ್ ಮುಂಬೈ ಮಹಾನಗರ ಪಾಲಿಕೆ ಈ ಬಗ್ಗೆ ಮಾಹಿತಿ ನೀಡಿದ್ದು, ನಿನ್ನೆ ಒಂದೇ ದಿನ ಮುಂಬೈನಲ್ಲಿ 1,460 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 80,188ಕ್ಕೆ ಏರಿಕೆಯಾಗಿದೆ. ಈ ಪೈಕಿ 53,054 ಸೋಂಕಿತರು ಗುಣಮುಖರಾಗಿದ್ದು, 27,134 ಸಕ್ರಿಯ ಪ್ರಕರಣಗಳಿವೆ.
ಇನ್ನು ನಿನ್ನೆ 41 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮುಂಬೈನಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 4,282 ಕ್ಕೆ ಏರಿಕೆಯಾಗಿದೆ ಎಂದು ಬಿಎಂಸಿ ಮಾಹಿತಿ ನೀಡಿದೆ.
ಧಾರಾವಿಯಲ್ಲಿ ಮತ್ತೆ 13 ಹೊಸ ಸೋಂಕು ಪ್ರಕರಣ
ಇನ್ನು ಏಷ್ಯಾದ ಅತೀ ದೊಡ್ಡ ಕೊಳಚೆ ಪ್ರದೇಶವೆಂದೇ ಹೇಳಲಾಗುವ ಮುಂಬೈನ ಧಾರಾವಿಯಲ್ಲಿ ನಿನ್ನೆ ಮತ್ತೆ 13 ಮಂದಿ ನಿವಾಸಿಗಳಲ್ಲಿ ಕೊರೋನಾ ಸೋಂಕು ದೃಢವಾಗಿದೆ. ಆ ಮೂಲಕ ಧಾರಾವಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2245ಕ್ಕೆ ಏರಿಕೆಯಾಗಿದೆ. ಅಂತೆಯೇ ಇಲ್ಲಿ ಈ ವರೆಗೂ 81 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
13 new #COVID19 positive cases have been reported from Dharavi area of Mumbai today, taking the total number of cases to 2245. Death toll stands at 81: Brihanmumbai Municipal Corporation (BMC)
— ANI (@ANI) June 28, 2020